ಶನಿವಾರ, ಮಾರ್ಚ್ 28, 2020
19 °C

25 ವರ್ಷಗಳ ಹಿಂದೆ | ಶನಿವಾರ, 28–1–1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

* ಕಾಶ್ಮೀರ: ಭಾರತದ ನಿಲುವಿಗೆ ಮಂಡೆಲಾ ಬೆಂಬಲ

ನವದೆಹಲಿ, ಜ. 27 (ಪಿಟಿಐ, ಯುಎನ್‌ಐ)– ಕಾಶ್ಮೀರ ಸಮಸ್ಯೆಯನ್ನು  ಭಾರತ ಮತ್ತು ಪಾಕಿಸ್ತಾನಗಳು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎನ್ನುವ ಮೂಲಕ ದಕ್ಷಿಣ ಆಫ್ರಿಕದ ಅಧ್ಯಕ್ಷ ನೆಲ್ಸನ್ ಮಂಡೆಲಾ ಅವರು ಇಂದು ಭಾರತದ ನಿಲುವನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ.

ಇದರ ಜತೆಗೆ ಭಯೋತ್ಪಾದಕ ಚಟುವಟಿಕೆ ಹಾಗೂ ಮಾದಕ ವಸ್ತುಗಳ ಕಳ್ಳಸಾಗಣೆ ತಡೆಯುವುದು, ವಿಜ್ಞಾನ, ತಂತ್ರಜ್ಞಾನ, ಪ್ರವಾಸೋದ್ಯಮ ಅಭಿವೃದ್ಧಿ ಸೇರಿದಂತೆ ಪರಸ್ಪರ ಸಹಕಾರ ನೀಡುವ ಮೂರು ಒಪ್ಪಂದಗಳಿಗೆ ಭಾರತ ಮತ್ತು ದಕ್ಷಿಣ ಆಫ್ರಿಕ ಸಹಿ ಮಾಡಲು ಇಂದು ಒಪ್ಪಿಕೊಂಡವು.

* ಅಕ್ರಮ ಸಾಗುವಳಿ ಸಕ್ರಮಕ್ಕೆ ಶಾಸಕರ ಬದಲು ಅಧಿಕಾರಿಗಳ ನೇತೃತ್ವದ ಸಮಿತಿ

ಬೆಂಗಳೂರು, ಜ. 27– ಅಕ್ರಮ ಸಾಗುವಳಿ ಸಕ್ರಮಗೊಳಿಸಲು ಇರುವ  ಶಾಸಕರ ನೇತೃತ್ವದ ಸಮಿತಿಗಳನ್ನು ರದ್ದುಗೊಳಿಸಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪುನರುಚ್ಚರಿಸುವ ಆಲೋಚನೆಯಿದೆ ಎಂದು ಕಂದಾಯ ಸಚಿವ ಆರ್.ಎಲ್. ಜಾಲಪ್ಪ ಅವರು ಇಂದು ಇಲ್ಲಿ ನುಡಿದರು.

‘ಈ ಸಮಿತಿಯಲ್ಲಿ ನಾಲ್ವರು ಅಧಿಕಾರೇತರ ಸದಸ್ಯರಿರುತ್ತಾರೆ. ಇವರಲ್ಲಿ ಪರಿಶಿಷ್ಟರು, ಹಿಂದುಳಿದವರು, ಮಹಿಳೆ ಹಾಗೂ ಸಾಮಾನ್ಯ ವರ್ಗದ ಒಬ್ಬೊಬ್ಬ ಸದಸ್ಯರಿರುತ್ತಾರೆ’ ಎಂದು ಅವರು ಪತ್ರಕರ್ತರಿಗೆ ತಿಳಿಸಿದರು. ಈಗಿರುವ ಶಾಸಕರ ನೇತೃತ್ವದ ಸಮಿತಿಗಳ ನಿರ್ವಹಣೆ ಬಗೆಗೆ ದೂರುಗಳಿರುವುದನ್ನು ಅವರು ಒಪ್ಪಿಕೊಂಡರು. 

* ರಾಜೀವ್ ಹತ್ಯೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ಧಾರ

ನವದೆಹಲಿ, ಜ. 27 (ಪಿಟಿಐ)– ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆಗೆ ಕಾರಣವಾದ ಪರಿಸ್ಥಿತಿಯ ಬಗ್ಗೆ ವರ್ಮಾ ಆಯೋಗ ತನಿಖೆ ನಡೆಸಿ ನೀಡಿರುವ ವರದಿಯಲ್ಲಿ ಹೆಸರಿಸಲಾಗಿರುವ ಉನ್ನತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

ಈ ಪ್ರಸ್ತಾವನೆಗೆ ಕೇಂದ್ರ ಸಂಪುಟ ಕಳೆದ ವಾರ ಒಪ್ಪಿಗೆ ನೀಡಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)