ಶುಕ್ರವಾರ, ಫೆಬ್ರವರಿ 21, 2020
28 °C

ಸೋಮವಾರ 13–2–1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೀಸಲಾತಿ ಸುಗ್ರೀವಾಜ್ಞೆ ವಾಪಸಿಗೆ ಸರ್ಕಾರ ನಕಾರ

ಬೆಂಗಳೂರು, ಫೆ. 12: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟಿನವರ ಮೀಸಲಾತಿಗೆ ಸಂಬಂಧಿಸಿದಂತೆ ಹೊರಡಿಸಿದ ಸುಗ್ರೀವಾಜ್ಞೆಯನ್ನು ಹಿಂತೆ
ಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಇಂದು ಸ್ಪಷ್ಟಪಡಿಸಿತು.

ಸು‌ಗ್ರೀವಾಜ್ಞೆಯನ್ನು ಹಿಂತೆಗೆದುಕೊಳ್ಳಬೇಕೆಂಬ ವಿರೋಧ ಪಕ್ಷಗಳ ಒತ್ತಾಯದ ಹಿನ್ನೆಲೆಯಲ್ಲಿ ಇಂದು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ದೇವೇಗೌಡ ಅವರು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ಇದರಿಂದ ತೀವ್ರ ಅಸಮಾಧಾನಗೊಂಡ ಕಾಂಗ್ರೆಸ್‌ ಮುಖಂಡರು ಸಭಾತ್ಯಾಗ ಮಾಡಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು. 

ಬಡ್ಡಿ ಮನ್ನಾ, ಅಗ್ಗದ ಅಕ್ಕಿಗೆ ಕೇಂದ್ರದ ನೆರವಿಲ್ಲ

ಬೆಂಗಳೂರು, ಫೆ. 12: ರೈತರ ಸಾಲದ ಬಡ್ಡಿ ಮನ್ನಾ ಹಾಗೂ ಅಗ್ಗದ ದರದಲ್ಲಿ ಅಕ್ಕಿ ವಿತರಣೆಯಂಥ ಜನಪ್ರಿಯ ಕಾರ್ಯಕ್ರಮಗಳಿಗೆ ಹಣಕ್ಕಾಗಿ ಕೇಂದ್ರ ಸರ್ಕಾರ ಅಥವಾ ನಬಾರ್ಡ್‌ಗೆ ಕೈ ಚಾಚುವ ಬದಲು ರಾಜ್ಯ ಸರ್ಕಾರಗಳೇ ತಮ್ಮ ಸಂಪನ್ಮೂಲ ಕ್ರೋಡೀಕರಿಸಿಕೊಳ್ಳಬೇಕು ಎಂದು ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಎಂ.ವಿ. ಚಂದ್ರಶೇಖರಮೂರ್ತಿ ಹೇಳಿದರು.

ಎಲ್ಲ ರಾಜ್ಯಗಳೂ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವುಗಳಿಗೆ ಕೇಂದ್ರ ಸರ್ಕಾರ ನೆರವು ನೀಡಲು ಮುಂದಾದರೆ ಆರ್ಥಿಕ ಬಿಕ್ಕಟ್ಟಿನ ಸುಳಿಗೆ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಸಿದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)