ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಗ್ರಾಹಕ ಹಕ್ಕುಗಳ ದಿನ: ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ದಿವಸ

Last Updated 15 ಮಾರ್ಚ್ 2022, 9:56 IST
ಅಕ್ಷರ ಗಾತ್ರ

ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಮಾರ್ಚ್‌ 15ರಂದು ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.

ಗ್ರಾಹಕರ ಹಕ್ಕುಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ, ಪ್ರತಿ ವರ್ಷವೂ ಒಂದೊಂದು ಧ್ಯೇಯದಂತೆ ಜಾಗತಿಕವಾಗಿ ಗ್ರಾಹಕರ ದಿನಾಚರಣೆ ಆಚರಿಸಲಾಗುವುದು.

ಗ್ರಾಹಕರ ಸುರಕ್ಷತೆ ಕಾಯ್ದೆಯ ಪ್ರಕಾರ ಗ್ರಾಹಕರಾಗಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸಬೇಕು ಎಂದು ಈ ದಿನದಂದು ಜನರಲ್ಲಿ ಜಾಗೃತಿ ಮೂಡಿಸಲಾಗುವುದು.

ಅಮೆರಿಕದಲ್ಲಿ 1983ರಿಂದ ಅಧಿಕೃತವಾಗಿ ಗ್ರಾಹಕರ ಹಕ್ಕುಗಳ ಆಂದೋಲನಕ್ಕೆ ಚಾಲನಕ್ಕೆ ನೀಡಲಾಯಿತು. ಅಂದಿನಿಂದ ಜಾಗತಿಕವಾಗಿ ಗ್ರಾಹಕರ ದಿನ ಆಚರಣೆ ಮಾಡಲಾಗುತ್ತದೆ.

ಭಾರತದಲ್ಲೂ ಪ್ರತಿ ವರ್ಷ ಗ್ರಾಹಕರ ಹಕ್ಕುಗಳ ದಿನವನ್ನು ಆಚರಣೆ ಮಾಡಲಾಗುತ್ತದೆ. ವಿಚಾರ ಸಂಕಿರಣಗಳು, ಚರ್ಚಾಗೋಷ್ಠಿಗಳು, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT