ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ದೇಶದ ಹಿತಾಸಕ್ತಿಯ ರೂಪದಲ್ಲಿ ಬಿಂಬಿಸಲಾಗುತ್ತಿದೆ. ದೇಶ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುವುದು ಜನಪರ ನಿರ್ಧಾರವಲ್ಲ. ದೇಶದ ಅತಿಶ್ರೀಮಂತರು, ಉದ್ಯಮಿಗಳು ಹಾಗೂ ರಾಜಕಾರಣಿಗಳು ‘ದೇಶಭಕ್ತಿ’ ಪ್ರದರ್ಶಿಸಬೇಕಾದ ಸಮಯವಿದು.