ಮಾರ್ಚ್ 8ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಶುಭಾಶಯಗಳು. ಕರ್ನಾಟಕದ ಜನಸಂಖ್ಯೆಯಲ್ಲಿ ಸುಮಾರು 49.1% ರಷ್ಟು ಮಹಿಳೆಯರಿದ್ದಾರೆ. ಇವರ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ಹಲವಾರು ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದಿದೆ. ಪೌಷ್ಟಿಕ ಆಹಾರದಿಂದ ಹಿಡಿದು ಆರ್ಥಿಕ ಸ್ವಾವಲಂಬನೆಯವರೆಗೆ ಪ್ರತಿಯೊಂದು ಹಂತದಲ್ಲೂ ಮಹಿಳೆಯರನ್ನು ಸಶಕ್ತಗೊಳಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.

ರಾಜ್ಯ ಸರ್ಕಾರವು 2007-08ರಿಂದಲೇ ಮಹಿಳಾ ಉದ್ದೇಶಿತ ಆಯವ್ಯಯ(Gender Budget) ಮಂಡಿಸುವ ಮೂಲಕ ಮಹಿಳೆಯರಿಗಾಗಿ ಪ್ರತ್ಯೇಕ ಅನುದಾನ ಮೀಸಲಿಡುತ್ತಿರುವುದು ವಿಶೇಷ. ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಗಳು ಸಮಾಜದಲ್ಲಿ ಸಬಲೀಕರಣ ಮತ್ತು ಸಮಾನತೆಯತ್ತ ಮಹತ್ವದ ಹೆಜ್ಜೆಯಾಗಿದೆ.

1. ರಾಜ್ಯದ ಗ್ಯಾರಂಟಿ ಯೋಜನೆಗಳು

* ಗೃಹಲಕ್ಷ್ಮಿ ಯೋಜನೆ: ಮಹಿಳೆಯರ ಆರ್ಥಿಕ ಸ್ಥಿತಿಗತಿ ಸುಧಾರಿಸಲು ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ಗಳನ್ನು ನೇರವಾಗಿ ಡಿಬಿಟಿ) ಮೂಲಕ ಜಮೆ ಮಾಡಲಾಗುತ್ತಿದೆ. ಈಗಾಗಲೇ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು ₹62,345 ಕೋಟಿಗಳನ್ನು ನೀಡಲಾಗಿದೆ.

* ಶಕ್ತಿ ಯೋಜನೆ: ಮಹಿಳೆಯರಿಗೆ ರಾಜ್ಯದೊಳಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುತ್ತದೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ನಿಗಮಗಳ ಸಾಮಾನ್ಯ ಬಸ್ಗಳಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಸಂಚರಿಸಬಹುದು. ಇದು ಮಹಿಳೆಯರ ಉದ್ಯೋಗ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸಿದೆ.

2. ಪೌಷ್ಟಿಕಾಂಶ ಮತ್ತು ಆರೋಗ್ಯಕ್ಕೆ ಆದ್ಯತೆ

ಮಹಿಳೆಯರ ಹಾಗೂ ಮಕ್ಕಳ ಅಪೌಷ್ಟಿಕತೆ ಒಂದು ದೊಡ್ಡ ಸವಾಲಾಗಿ ನಿಂತಿದೆ. ಅಪೌಷ್ಟಿಕತೆಯನ್ನು ಹೋಗಲಾಡಿಸಲು ಸರ್ಕಾರ ವಿವಿಧ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ:

* ಪೌಷ್ಟಿಕ ಆಹಾರ: 06 ತಿಂಗಳಿಂದ 06 ವರ್ಷದ ಮಕ್ಕಳಿಗೆ 500 ಕ್ಯಾಲೋರಿ, 12-15 ಗ್ರಾಂ ಪ್ರೋಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗೆ ಹಾಗೂ ಪ್ರಾಯಪೂರ್ವ ಬಾಲಕಿಯರಿಗೆ 600 ಕ್ಯಾಲೋರಿ, 18-20 ಗ್ರಾಂ ಪ್ರೋಟೀನ್ ಹಾಗೂ ತೀವು ಅಪೌಷ್ಠಿಕ ಮಕ್ಕಳಿಗೆ 800 ಕ್ಯಾಲೋರಿ, 20-25 ಗ್ರಾಂ ಪ್ರೋಟೀನ್ ಯುಕ್ತ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ.

* ಮಾತೃಪೂರ್ಣ ಯೋಜನೆ: ಗರ್ಭಿಣಿ ಮತ್ತು ಬಾಣಂತಿಯರಿಗೆ 600 ಕ್ಯಾಲೋರಿ, 18-20 ಗ್ರಾಂ ಪ್ರೋಟೀನ್ ಒಳಗೊಂಡ ಬಿಸಿಯೂಟ, ಹಾಲು ಮತ್ತು ಮೊಟ್ಟೆಯನ್ನು ಪ್ರತಿ ಫಲಾನುಭವಿಗೆ ಪ್ರತಿ ದಿನಕ್ಕೆ ರೂ.21/-ರ ಘಟಕ ವೆಚ್ಚವನ್ನು ನಿಗದಿಪಡಿಸಲಾಗಿದೆ. 2025-26ನೇ ಸಾಲಿನಲ್ಲಿ ಸುಮಾರು 3,87,191 ಗರ್ಭಿಣಿಯರು ಮತ್ತು 3,42,230 ಬಾಣಂತಿ ಮಹಿಳೆಯರು ಇದರ ಲಾಭ ಪಡೆದಿದ್ದಾರೆ.

* ಸೃಷ್ಟಿ ಮತ್ತು ಕ್ಷೀರಭಾಗ್ಯ: ಸೃಷ್ಟಿ ಯೋಜನೆಯಡಿ 03 ವರ್ಷದಿಂದ 06 ವರ್ಷದ ಎಲ್ಲಾ ಸಾಮಾನ್ಯ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ (ರೂ.6/- ರ ದರದಲ್ಲಿ) ಹಾಗೂ ವಾರದಲ್ಲಿ ಎರಡು ದಿನ ಮೊಟ್ಟೆ (ರೂ.6/- ರ ದರದಲ್ಲಿ) ಹಾಗೂ ಕ್ಷೀರ ಭಾಗ್ಯ ಯೋಜನೆಯಡಿ ವಾರದಲ್ಲಿ ಐದು ದಿನ 150 ಎಂ.ಎಲ್ ಕೆನಸಹಿತ ಹಾಲು ಹಾಗೂ 05 ಗ್ರಾಂ ಸಕ್ಕರೆ ನೀಡಲಾಗುತ್ತಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಇನ್ನು ಹೆಚ್ಚುವರಿ ಪೌಷ್ಟಿಕ ಆಹಾರ ಹಾಗೂ ಆರೋಗ್ಯ ಆರೈಕೆ ವ್ಯವಸ್ಥೆಯೂ ಇದೆ.

3. ಬಾಲಕಿಯರ ಶಿಕ್ಷಣ ಮತ್ತು ಭವಿಷ್ಯ

* ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆ: ಹೆಣ್ಣು ಮಗುವಿನ ಜನನವನ್ನು ಪ್ರೋತ್ಸಾಹಿಸಲು ಮತ್ತು ಲಿಂಗಾನುಪಾತ ಸುಧಾರಿಸಲು ಬಿಪಿಎಲ್ ಕುಟುಂಬಗಳ ಹೆಣ್ಣು ಮಕ್ಕಳಿಗೆ ಆರ್ಥಿಕ ಭದ್ರತೆ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.26322.00 ಲಕ್ಷಗಳನ್ನು 863190 ಲಕ್ಷ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿರುತ್ತದೆ.

* ವಸತಿ ನಿಲಯಗಳು: ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ರಾಜ್ಯಾದ್ಯಂತ ಮೆಟ್ರಿಕ್ ಪೂರ್ವ ಮತ್ತು ನಂತರದ ವಸತಿ ನಿಲಯಗಳನ್ನು ನಡೆಸಲಾಗುತ್ತಿದೆ.

* ದೀಪಿಕಾ ವಿದ್ಯಾರ್ಥಿ ವೇತನ: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ ರೂ.30,000/- ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

4. ಆರ್ಥಿಕ ಸ್ವಾವಲಂಬನೆ ಮತ್ತು ಉದ್ಯೋಗ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಮಹಿಳೆಯರನ್ನು ಉದ್ಯಮಿಗಳನ್ನಾಗಿ ಮಾಡಲು ಹಲವು ಕ್ರಮ ಕೈಗೊಳ್ಳಲಾಗಿದೆ:

* ಸ್ವಸಹಾಯ ಸಂಘಗಳು: ರಾಜ್ಯದಲ್ಲಿ 1.65 ಲಕ್ಷಕ್ಕೂ ಹೆಚ್ಚು ಗುಂಪುಗಳಿದ್ದು, 25 ಲಕ್ಷ ಮಹಿಳೆಯರು ಸಂಘಟಿತರಾಗಿದ್ದಾರೆ. ಮಹಿಳಾ ಉದ್ಯಮಿಗಳಿಗೆ ಗರಿಷ್ಠ 25 ಲಕ್ಷ ರೂ. ವರೆಗೆ ಸಾಲ ಸೌಲಭ್ಯವಿದೆ.

* MSIL ಚಿಟ್ ಫಂಡ್ ಯೋಜನೆ: ಮೈಸೂರು ಸೇಲ್ಸ್ ಇಂಟರ್ನ್ಯಾಶನಲ್ ಲಿಮಿಟೆಡ್ (MSIL) ಚಿಟ್ ಫಂಡ್ ಮಹಿಳೆಯರಿಗಾಗಿ, ವಿಶೇಷವಾಗಿ 'ಗೃಹಲಕ್ಷ್ಮಿ' ಫಲಾನುಭವಿಗಳು ಮತ್ತು ಸ್ವಸಹಾಯ ಸಂಘಗಳ (SHG) ಸದಸ್ಯರಿಗೆ ಸುರಕ್ಷಿತ ಉಳಿತಾಯ ಮತ್ತು ಹೂಡಿಕೆ ಅವಕಾಶಗಳನ್ನು ಒದಗಿಸುತ್ತದೆ. ಇದು ಕರ್ನಾಟಕ ಸರ್ಕಾರದ ಮಾಲೀಕತ್ವದ ಸಂಸ್ಥೆಯಾಗಿದ್ದು, ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ಗ್ರಾಮೀಣ ಭಾಗದ ಜನರನ್ನು ಮೈಕ್ರೋ ಫೈನಾನ್ಸ್ ಶೋಷಣೆಯಿಂದ ರಕ್ಷಿಸುವ ಗುರಿಯನ್ನು ಹೊಂದಿದೆ.

* ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳು: 6 ಪ್ರಮುಖ ನಗರಗಳಲ್ಲಿ 23 ಉದ್ಯೋಗಸ್ಥ ಮಹಿಳೆಯರಿಗೆ ವಸತಿನಿಲಯಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭಿಸಲಾಗಿದೆ. ಗಾರ್ಮೆಂಟ್ಸ್, ಕೈಗಾರಿಕೆಗಳು ಮತ್ತು ಇತರ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ದುಡಿಯುವ ಮಹಿಳೆಯರಿಗೆ ಆದ್ಯತೆ ಮೇರೆಗೆ ಸೌಲಭ್ಯ ನೀಡಲಾಗುತ್ತಿದೆ. 2026-27 ನೇ ಆಯವ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸಂಖ್ಯಾ ಬಲದ 10 ವಸತಿ ನಿಯಲಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪ್ರಾರಂಭಿಸಲು ಘೋಷಿಸಲಾಗಿದೆ.

* ಕೂಸಿನ ಮನೆ: ನರೇಗಾ (MGNREGA) ಅಡಿಯಲ್ಲಿ ಕೆಲಸ ಮಾಡುವ ತಾಯಂದಿರ ಮಕ್ಕಳ ಆರೈಕೆಗಾಗಿ 4,000 ಗ್ರಾಮ ಪಂಚಾಯತ್ಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮಹಿಳೆಯರ ಉದ್ಯೋಗ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಈ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 6 ತಿಂಗಳಿಂದ 3 ವರ್ಷ ವಯಸ್ಸಿನ ಮಕ್ಕಳಿಗೆ ಸುರಕ್ಷತೆ, ಸ್ವಚ್ಛತೆ, ಆರೋಗ್ಯ, ಪೌಷ್ಟಿಕ ಆಹಾರ ಮತ್ತು ಪ್ರಾಥಮಿಕ ಬೆಳವಣಿಗೆಗೆ ಅಗತ್ಯವಾದ ಉತ್ತೇಜನವನ್ನು ಒದಗಿಸಲಾಗುತ್ತದೆ, ಇದರಿಂದ ಕೆಲಸ ಮಾಡುವ ತಾಯಂದಿರಿಗೆ ತಮ್ಮ ಮಕ್ಕಳ ಆರೈಕೆಯ ಬಗ್ಗೆ ಆತಂಕವಿಲ್ಲದೆ ಕೆಲಸ ಮಾಡಲು ಸಹಾಯವಾಗುತ್ತದೆ.

* ಶಿಶುವಿಹಾರಗಳು: ರಾಜ್ಯದ ಪ್ರತೀ ಜಿಲ್ಲೆಯ 2 ಸರ್ಕಾರಿ ಕಛೇರಿಗಳಲ್ಲಿ ಮತ್ತು ಪ್ರತಿ ಜಿಲ್ಲೆಯ 2 ತಾಲ್ಲೂಕುಗಳಲ್ಲಿ ಹೆಚ್ಚು ಮಹಿಳಾ ಸಾಂದ್ರತೆ ಇರುವ ಪ್ರದೇಶಗಳಲ್ಲಿ ಮತ್ತು 123 ಶಿಶುಪಾಲನಾ ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. 2986 ಮಕ್ಕಳು ಯೋಜನೆಯ ಪ್ರಯೋಜನ ಪಡೆದಿರುತ್ತಾರೆ. 2026-27 ನೇ ಆಯವ್ಯಯದಲ್ಲಿ 20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲು 1 ಕೋಟಿ ಅನುದಾನ ನೀಡಲಾಗಿದೆ.

* ಸಂಜೀವಿನಿ (NRLM): ಮಹಿಳಾ ಸ್ವಸಹಾಯ ಸಂಘಗಳನ್ನು ಬಲಪಡಿಸುವ ಮತ್ತು ಆ ಮೂಲಕ ಗ್ರಾಮೀಣ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ. ಪ್ರಸ್ತುತ, ಈ ಸಂಸ್ಥೆಯು ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸುಮಾರು 30 ಲಕ್ಷ ಗ್ರಾಮೀಣ ಮಹಿಳೆಯರನ್ನು ಸಂಘಟಿಸಿ, ಕಿರು ಉದ್ದಿಮೆಗಳನ್ನು ಪ್ರಾರಂಭಿಸಲು ಬೆಂಬಲ ನೀಡಲಾಗುತ್ತಿದೆ.

* ಉದ್ಯೋಗಿನಿ ಯೋಜನೆ: ಸ್ವಯಂ ಉದ್ಯೋಗಕ್ಕಾಗಿ 1 ರಿಂದ 3 ಲಕ್ಷ ರೂ.ವರೆಗೆ ಸಾಲ ಮತ್ತು ಸಹಾಯಧನ ನೀಡಲಾಗುತ್ತದೆ.

* ಚೇತನ ಯೋಜನೆ: ದಮನಿತ ಮಹಿಳೆಯರ ಪುನರ್ವಸತಿಗಾಗಿ 30,000 ರೂ. ಪ್ರೋತ್ಸಾಹಧನ.

5. ಸುರಕ್ಷತೆ ಮತ್ತು ಸಾಮಾಜಿಕ ರಕ್ಷಣೆ

* ಅಕ್ಕ ಪಡೆ: ಕಳೆದ ಸಾಲಿನಲ್ಲಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ, 2831 ವರದಕ್ಷಿಣೆ ಕಿರುಕುಳ ಪ್ರಕರಣಗಳು ದಾಖಲಾಗಿದ್ದು, 5,842 ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿದ್ದು, ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆಗಾಗಿ 2025-26ನೇ ಸಾಲಿನಿಂದ 'ಅಕ್ಕ ಪಡೆ'ಯನ್ನು ಜಾರಿಗೊಳಿಸಲಾಗಿದೆ. ರಾಜ್ಯದ 31 ಜಿಲ್ಲೆಗಳಲ್ಲಿ ಗೃಹ ರಕ್ಷಕ ದಳದ ಮಹಿಳಾ ಸದಸ್ಯರನ್ನೊಳಗೊಂಡ ಈ ಪಡೆ ಗಸ್ತು ಸಂಚರಿಸಲು ವಾಹನ ಸೌಲಭ್ಯವನ್ನೂ ಹೊಂದಿದೆ.

* ಶಕ್ತಿ ಸದನ (ಸ್ವಾಧಾರ ಗೃಹ ಮತ್ತು ಉಜ್ವಲ ಕೇಂದ್ರ): ಸ್ವಾಧಾರ ಗೃಹ ಯೋಜನೆಯ ಮುಖ್ಯ ಉದ್ದೇಶ ಕಷ್ಟಕರ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ಆಶ್ರಯ. ತರಬೇತಿ ಹಾಗೂ ಶಿಕ್ಷಣ ನೀಡುವುದರ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಸಶಕ್ತರನ್ನಾಗಿ ಮಾಡುವುದಾಗಿರುತ್ತದೆ.

* ಉಜ್ವಲ ಯೋಜನೆಯು ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕ ತಡೆಗಟ್ಟಲು ಹಾಗೂ ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ದುರುಪಯೋಗಕ್ಕೆ ಒಳಪಟ್ಟವರನ್ನು ರಕ್ಷಿಸಲು ಮತ್ತು ಪುನರ್ವಸತಿ ಕಲ್ಪಿಸಲು ಹಾಗೂ ಇವರುಗಳ ಕುಟುಂಬದವರೊಂದಿಗೆ ಪುನರ್ವಿಲೀನಗೊಳಿಸುವ ಉದ್ದೇಶವನ್ನು ಹೊಂದಿರುತ್ತದೆ. ಪ್ರಸ್ತುತ ರಾಜ್ಯಾದ್ಯಂತ 40 ಶಕ್ತಿ ಸದನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

* ಒನ್ ಸ್ಟಾಪ್ ಸೆಂಟರ್ (ಸಖಿ): ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ಅಂದರೆ, ವೈದ್ಯಕೀಯ ಚಿಕಿತ್ಸೆ ಮತ್ತು ನೆರವು, ಪೊಲೀಸ್ ನೆರವು, ಕಾನೂನು ನೆರವು ಹಾಗೂ ಸಮಾಲೋಚನೆ ವ್ಯವಸ್ಥೆಗಳನ್ನು ಒನ್ ಸ್ಟಾಪ್ ಸೆಂಟರ್ನಲ್ಲಿ ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಒನ್ ಸ್ಟಾಪ್ ಸೆಂಟರ್ (ಸಖಿಗಳು ಕಾರ್ಯನಿರ್ವಹಿಸುತ್ತಿವೆ.

* ಸಾಂತ್ವನ ಯೋಜನೆ: ಸಮಾಜದಲ್ಲಿ ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಮ, ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ ಕಾನೂನು ನೆರವು ಹಾಗೂ ಸಮಾಲೋಚನೆಯನ್ನು ಒದಗಿಸಲಾಗುತ್ತಿದೆ. ಪ್ರಸ್ತುತ 177 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

6. ವಿಶೇಷ ಪುನರ್ವಸತಿ ಯೋಜನೆಗಳು

* ಮಾಜಿ ದೇವದಾಸಿ ಪುನರ್ವಸತಿ: ಆರ್ಥಿಕವಾಗಿ ಮಾಜಿ ದೇವದಾಸಿಯರನ್ನು ಸಬಲೀಕರಣಗೊಳಿಸಲು ಆದಾಯೋತ್ಪನ್ನಕರ ಚಟುವಟಿಕೆ ಕೈಗೊಳ್ಳುವ ಉದ್ದೇಶಕ್ಕಾಗಿ ನಿಗಮದಿಂದ 45 ವರ್ಷ ಮೇಲ್ಪಟ್ಟ ಮಾಜಿ ದೇವದಾಸಿ ಮಹಿಳೆಯರಿಗೆ ನೇರವಾಗಿ ಪ್ರೋತ್ಸಾಹಧನ ಮೊತ್ತ ರೂ.45,000/-ಗಳ ಆರ್ಥಿಕ ಸೌಲಭ್ಯವನ್ನು ನೀಡಲಾಗುತ್ತಿದೆ. ಫಲಾನುಭವಿಗಳನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ.

* ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣ: ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ ಒಟ್ಟು 10365 ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಲ್ಲಿ ಗುರುತಿಸಿಕೊಂಡಿದ್ದು, ಸದರಿ ಸಮುದಾಯದವರ ಪುನರ್ವಸತಿಗೆ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಒಟ್ಟು 4689 ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ.

ಮಹಿಳೆಯರು, ಪುರುಷರು ಜಂಟಿಯಾಗಿ ನಮ್ಮ ನಾಡಿನ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ದಿಯಲ್ಲಿ ಸಮಾನ ಪಾಲು ವಹಿಸಲು ಸರ್ಕಾರದ ಯೋಜನೆಗಳೊಂದಿಗೆ ಸಮಾಜದ ಮಾನಸಿಕ ಹಾಗೂ ಮೌಲಿಕ ಹೊಣೆ ಇರಲಿ ಎಂದು ಆಶಿಸುತ್ತೇನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.