ಜನವರಿ 9ರಂದು ದೇಶದಾದ್ಯಂತ 'ಪ್ರವಾಸಿ ಭಾರತೀಯ ದಿವಸ್' ಆಚರಿಸಲಾಗುತ್ತದೆ. ದೇಶದ ಅಭಿವೃದ್ಧಿಗೆ ಅನಿವಾಸಿ ಭಾರತೀಯರು ನೀಡಿರುವ ಕೊಡುಗೆಗಳನ್ನು ಸ್ಮರಿಸುವ ದಿನ ಇದಾಗಿದೆ.
ಜ.9 ರಂದೇ ಆಚರಣೆ ಯಾಕೆ?
1915ರ ಜನವರಿ 9ರಂದು ಮಹಾತ್ಮ ಗಾಂಧೀಜಿ ಅವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ವಾಪಸ್ ಆಗಿದ್ದರು. ಬಳಿಕ ಅವರು ಸ್ವಾತಂತ್ರ್ಯ ಹೋರಾಟದ ಮುಂದಾಳತ್ವ ವಹಿಸಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಗಾಂಧೀಜಿ ಅವರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಮತ್ತು ಭಾರತದ ಅಭಿವೃದ್ಧಿಯಲ್ಲಿ ಅನಿವಾಸಿ ಭಾರತೀಯರ ಪಾತ್ರವನ್ನು ಗುರುತಿಸುವ ಉದ್ದೇಶದಿಂದ ಜ. 9ಅನ್ನು ‘ಪ್ರವಾಸಿ ಭಾರತೀಯ ದಿವಸ್’ ಎಂದು ಆಚರಿಸುವುದಾಗಿ ಭಾರತ ಸರ್ಕಾರ ಘೋಷಿಸಿದೆ.
ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ನೆಲೆಸಿರುವ ಪ್ರಮುಖ 10 ದೇಶಗಳಿವು