ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಚಂದ್ರಪುರ ಮಠದ ಅರ್ಜಿ ರದ್ದುಗೊಳಿಸಿದ ಬಿಬಿಎಂ ಆದೇಶಕ್ಕೆ ಹೈಕೋರ್ಟ್ ತಡೆ

Last Updated 30 ಮೇ 2018, 13:02 IST
ಅಕ್ಷರ ಗಾತ್ರ

ಬೆಂಗಳೂರು: ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠವು ನಾಗರಿಕ ಸೌಲಭ್ಯದ (ಸಿ.ಎ) ನಿವೇಶನದಲ್ಲಿ ಕಟ್ಟಡ ನಿರ್ಮಾಣ ಯೋಜನೆ ಮಾಡಿರುವುದು ಮತ್ತು ಖಾತೆ ನೋಂದಣಿಗೆ ಸಲ್ಲಿಸಿದ ಅರ್ಜಿ ರದ್ದುಗೊಳಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಬಿಬಿಎಂಪಿ ಆದೇಶ ಪ್ರಶ್ನಿಸಿ ರಾಮಚಂದ್ರಾಪುರ ಮಠದ ವತಿಯಿಂದ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

‘ಮಠವು ಕಟ್ಟಡ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯಲು ಕಾನೂನುಬಾಹಿರವಾಗಿ, 1985ರ ಏಪ್ರಿಲ್‌ 6ರ ದಿನಾಂಕ ಹೊಂದಿದ್ದ ಒಂದು ಪುಟದ ಆದೇಶವನ್ನು ಸೃಷ್ಟಿಸಿದೆ. ಆದರೆ, ಅದರ ಮೂಲ ದಾಖಲೆಗಳು ಬಿಡಿಎಯಲ್ಲಿ ಇಲ್ಲ’ ಎಂದು ಬಿಬಿಎಂಪಿ ಆಯುಕ್ತರುಮಠದ ಅರ್ಜಿ ವಜಾ ಮಾಡಿದ್ದರು..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT