ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಬಳ ನೀಡಲು ಆಗ್ರಹ

ನಗರದ ವಾಟರ್ ಟ್ಯಾಂಕ್‌ ಬಳಿ ಪೌರಕಾರ್ಮಿಕರ ಪ್ರತಿಭಟನೆ
Last Updated 3 ಜೂನ್ 2018, 11:40 IST
ಅಕ್ಷರ ಗಾತ್ರ

ಕೊಳ್ಳೇಗಾಲ: ‘ನಗರಸಭೆಯು ಆರು ತಿಂಗಳಿಂದ ಸಂಬಳ ನೀಡಿಲ್ಲ’ ಎಂದು ಆರೋಪಿಸಿ ಪೌರಕಾರ್ಮಿಕರು ಕರ್ನಾಟಕ ಯುವಶಕ್ತಿ ವೇದಿಕೆಯ ನೇತೃತ್ವದಲ್ಲಿ ಇಲ್ಲಿನ ವಾಟರ್‌ ಟ್ಯಾಂಕ್‌ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರಸಭೆ ಅಧ್ಯಕ್ಷ ಎಸ್.ರಮೇಶ್ ಅವರು ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಅಹವಾಲು ಆಲಿಸಿದರು. ‘ಮಳೆ–ಗಾಳಿ ಎನ್ನದೆ ಬೆಳಿಗ್ಗೆಯೇ ಕೆಲಸಕ್ಕೆ ಹಾಜರಾಗುತ್ತೇವೆ. ನಗರವನ್ನು ಸ್ವಚ್ಛವಾಗಿಡುವ ನಮ್ಮ ಬದುಕೇ ಸಂಕಷ್ಟಕ್ಕೆ ಸಿಲುಕಿದೆ. ಮಕ್ಕಳಿಗೆ ಶಾಲಾ ಶುಲ್ಕ ಕಟ್ಟಲು ಹಾಗೂ ಸಂಸಾರದ ನಿರ್ವಹಣೆ ಮಾಡಲು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.

ಈ ವೇಳೆ ಮಾತನಾಡಿದ ವೇದಿಕೆಯ ಟೌನ್ ಅಧ್ಯಕ್ಷ ಆನಂದ್‌, ‘ಪೌರಕಾರ್ಮಿಕರಿಗೆ ಸಂಬಳ ಕೊಡದೆ ಅವರ ಜೀವನ ನಿರ್ವಹಣೆ ಕಷ್ಟವಾಗಿದೆ. ಅವರಿಗೆ ಸಂಬಳವನ್ನು ಕೂಡಲೇ ನೀಡಬೇಕು. ಇಲ್ಲದಿದ್ದರೆ ನಗರ ಸಭೆಗೆ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ನಗರಸಭೆ ಅಧ್ಯಕ್ಷ ಎಸ್.ರಮೇಶ್ ಮಾತನಾಡಿ, ‘ನಾನು ಅಧ್ಯಕ್ಷನಾಗಿ 5 ದಿನಗಳಾಗಿವೆ. ಈ ಬಗ್ಗೆ ಮಾಹಿತಿ ಇಲ್ಲ. ಎರಡು ದಿನಗಳಲ್ಲಿ ಪೌರಕಾರ್ಮಿಕರಿಗೆ ಸಂಬಳ ನೀಡಲಾಗುತ್ತದೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT