ನವದೆಹಲಿ: ಕರಾವಳಿ ಕ್ರೀಡೆ ಕಂಬಳ ಬೆಂಬಲಿಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

‘ಕಂಬಳಕ್ಕಿದ್ದ ಎಲ್ಲ ಅಡೆತಡೆಗಳು ಈಗ ಪೂರ್ಣಗೊಂಡಿದ್ದು, ಗ್ರಾಮೀಣ ಕ್ರೀಡೆಯನ್ನು ಉಳಿಸಬೇಕಾಗಿದೆ’ ಎಂದು ಸೆಹ್ವಾಗ್ ಸೋಮವಾರ ಟ್ವೀಟ್ ಮಾಡಿದ್ದರು.

ಟ್ವೀಟ್ನಲ್ಲಿ ಏನಿದೆ?
ಕಂಬಳದ ವಿಧೇಯಕಕ್ಕೆ ರಾಷ್ಟ್ರಪತಿಗಳು ಒಪ್ಪಿಗೆ ಸೂಚಿಸಿದ್ದಾರೆ. ಕರ್ನಾಟಕದ ಕಾನೂನು ಬದ್ಧ ಗ್ರಾಮೀಣ ಕ್ರೀಡೆಯಾಗಿದೆ. ಯುವಜನರನ್ನು ಪುನಶ್ಚೇತನಗೊಳಿಸಲು ಇರುವ ಮಾರ್ಗಗಳನ್ನು ತಡೆಯಲು ಕೆಲ ಕಪಟ ಸಂಘಟನೆಗಳ ಪ್ರಯತ್ನಗಳಿಗೆ ಇದೀಗ ತಡೆಯಾಗಿದೆ’ ಎಂದು ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳ ಜನಪ್ರಿಯ ಕ್ರೀಡೆಯಾದ ಕಂಬಳಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯ ವಿಧಾನಸಭೆಯು ಕಳೆದ ನವೆಂಬರ್ 17ರಂದು ಅಂಗೀಕರಿಸಿದ್ದ ಪ್ರಾಣಿ ಹಿಂಸೆ ತಡೆ (ತಿದ್ದುಪಡಿ) ಮಸೂದೆ– 2017ಕ್ಕೆ ರಾಷ್ಟ್ರಪತಿಯವರ ಅಂಕಿತ ದೊರೆತಿದೆ.

ಫೆಬ್ರುವರಿ 10ರಂದು ತಿದ್ದುಪಡಿ ಮಸೂದೆಗೂ ರಾಷ್ಟ್ರಪತಿಯವರು ಅಂಕಿತ ದೊರೆತಿದೆ. ಸೋಮವಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರದ ಗೃಹ ಸಚಿವಾಲಯವು ಇದನ್ನು ಖಚಿತಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.