ಶನಿವಾರ, ಜನವರಿ 23, 2021
22 °C

ಒಳನೋಟ: 4,001 ಕೆರೆಗಳಲ್ಲಿ ತುಂಬಿದ್ದು 630

ರಾಜೇಶ್‌ ರೈ ಚಟ್ಲ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಜಲ ಸಂಪನ್ಮೂಲ ಇಲಾಖೆ ಒಟ್ಟು ₹14,549 ಕೋಟಿ ಮೊತ್ತದಲ್ಲಿ 4,001 ಕೆರೆಗಳನ್ನು ತುಂಬಿಸುವ 134 ಯೋಜನೆಗಳನ್ನು ಕೈಗತ್ತಿಕೊಂಡಿದ್ದು, ಈಗಾಗಲೇ ₹6,548 ಕೋಟಿ ವೆಚ್ಚ ಮಾಡಲಾಗಿದೆ.

ಈ ಪೈಕಿ 41 ಯೋಜನೆಗಳು ಪೂರ್ಣಗೊಂಡಿದ್ದು, 630 ಕೆರೆಗಳನ್ನು ತುಂಬಿಸಲಾಗಿದೆ. ಇದಕ್ಕೆ ಒಟ್ಟು ₹2,115 ಕೋಟಿ ವೆಚ್ಚ ಮಾಡಲಾಗಿದೆ ಎಂದು ಇಲಾಖೆಯ ಮೂಲಗಳು ಹೇಳಿವೆ.

ಪ್ರಸಕ್ತ ಸಾಲಿನಲ್ಲಿ ಕೆರೆ ತುಂಬಿಸುವ ಮತ್ತು ನೀರಾವರಿ ಸೌಲಭ್ಯ ಒದಗಿಸುವ ಒಟ್ಟು ₹ 4,134 ಕೋಟಿ ಮೊತ್ತದ 11 ಯೋಜನೆಗಳಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಭದ್ರಾ ಉಪ ಜಲಾನಯನ ಪ್ರದೇಶದಿಂದ ಏತ ನೀರಾವರಿ ಮೂಲಕ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ 31, ಕಡೂರು ತಾಲ್ಲೂಕಿನ 116, ಚಿಕ್ಕಮಗಳೂರು ತಾಲ್ಲೂಕಿನ 48 ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ 4 ಸೇರಿ ಒಟ್ಟು 197 ಕೆರೆಗಳನ್ನು₹ 1,281.80 ಕೋಟಿ ವೆಚ್ಚದಲ್ಲಿ ತುಂಬಿಸಲು ಯೋಜಿಸಲಾಗಿದೆ.

ಬೆಳಗಾವಿ ಜಿಲ್ಲೆ ಗೋಕಾಕ‌ ತಾಲ್ಲೂಕಿನಲ್ಲಿ ₹ 900 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಮತ್ತು ಕೈಗಾರಿಕೆ ಮತ್ತು ಕೆರೆ ತುಂಬಿಸುವ ಘಟ್ಟಿ ಬಸವಣ್ಣ ಯೋಜನೆಗೆ  ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು