ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳನೋಟ: ಕೋವಿಡ್‌ ಮೂರನೇ ಅಲೆಯ ಅಪಾಯ ಎದುರಿಸಲು ಸಿದ್ಧತೆ

Last Updated 5 ಸೆಪ್ಟೆಂಬರ್ 2021, 3:41 IST
ಅಕ್ಷರ ಗಾತ್ರ

ಬೆಂಗಳೂರು: ರಾಮನಗರ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಪ್ರಸ್ತುತ 370 ಆಮ್ಲಜನಕ‌ ಸಹಿತ ಹಾಸಿಗೆಗಳ ವ್ಯವಸ್ಥೆಯಿದೆ. 47 ವೆಂಟಿಲೇಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ.

ತುಮಕೂರು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದಿಸುವ ಒಂದು ಸಾವಿರ ಎಲ್‌ಪಿಎಂ ಸಾಮರ್ಥ್ಯದ ಎರಡು ಘಟಕಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಕೋಲಾರ ಜಿಲ್ಲೆಯ‌ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ. ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆ, ಶ್ರೀನಿವಾಸಪುರ, ಬಂಗಾರಪೇಟೆ ಹಾಗೂ ಮಾಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ತಲಾ 2 ವೈದ್ಯಕೀಯ ಆಮ್ಲಜನಕ‌ ಉತ್ಪಾದನಾ ಘಟಕಗಳನ್ನು ಆರಂಭಿಸಲಾಗಿದೆ.

ಇಸ್ರೇಲ್‌ ತಂತ್ರಜ್ಞಾನ ಘಟಕ ಕಾರ್ಯಾರಂಭ: ಕೋವಿಡ್‌ ವಿಷಮ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಜಿಲ್ಲೆಯ ಕೆಜಿಎಫ್‌ ಸಾರ್ವಜನಿಕ ಆಸ್ಪತ್ರೆಗೆ ಮಂಜೂರಾಗಿದ್ದ ಇಸ್ರೇಲ್ ತಂತ್ರಜ್ಞಾನ ಆಧಾರಿತ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ಕಾರ್ಯಾರಂಭ ಮಾಡಿದೆ.

ಚಿಕ್ಕಬಳ್ಳಾಪುರದ ಹೊಸ ಜಿಲ್ಲಾ ಆಸ್ಪತ್ರೆ ಮತ್ತು ಹಳೇ ಜಿಲ್ಲಾ ಆಸ್ಪತ್ರೆಯಲ್ಲಿ ತಲಾ ಎರಡು ಸಾವಿರ ಲೀಟರ್ ದ್ರವೀಕೃತ ಆಮ್ಲಜನಕ ಸಂಗ್ರಹ ಘಟಕವಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಜಂಬೊ ಸಿಲಿಂಡರ್‌ಗಳ ಸಂಗ್ರಹವಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲೂ ಆಮ್ಲಜನಕ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಹೊಸಕೋಟೆಯ ಎಂಜೆಎ ಆಸ್ಪತ್ರೆ, ನೆಲಮಂಗಲದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ದೇವನಹಳ್ಳಿಯ ಆಕಾಶ್ ಆಸ್ಪತ್ರೆಗಳು ಸ್ವಂತ ಆಮ್ಲಜನಕ ಘಟಕಗಳನ್ನು ಹೊಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT