ಕೇಂದ್ರ ಸರ್ಕಾರದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ‘ಭಗವದ್ಗೀತೆ’ ಭಾರತದ ರಾಷ್ಟ್ರೀಯ ಧರ್ಮಗ್ರಂಥ
ವಾಗಬೇಕು ಎಂದು ಹೇಳಿದ್ದರಿಂದ ಚರ್ಚೆ ಶುರುವಾಗಿದೆ. ಸಂಸತ್ತಿನಲ್ಲಿ ಆಡಳಿತೇತರ ಪಕ್ಷಗಳಿಗೆ ಸೇರಿದ ಕೆಲವು ಸಂಸದರು ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಗೀತೆಯಲ್ಲಿ ಏನಿದೆ? ಅದು ಇರುವುದು ಯಾರ ಪರ ಅಥವಾ ವಿರುದ್ಧ? ಎಂಬುದರ ಕಡೆ ಯಾರೂ ಗಮನ ಹರಿಸಿಲ್ಲ.

ಕ್ರಾಂತಿಕಾರಕ ಬುದ್ಧಧಮ್ಮ ಉಚ್ಛ್ರಾಯ ಸ್ಥಿತಿಗೇರಿ ಆ ಹೊತ್ತಿಗೆ ಇಳಿಮುಖವಾಗುತ್ತಿತ್ತು. ಬುದ್ಧ ಸೈದ್ಧಾಂತಿಕವಾಗಿ ಜಾತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ. ಇದನ್ನು ಸಹಿಸದ ವೈದಿಕ ಮತಾಂಧತೆ ಸಂಘವನ್ನು ನಾಶ ಮಾಡಲು ಸನ್ನಾಹ ನಡೆಸುತ್ತಿತ್ತು. ಪ್ರತಿ ಕ್ರಾಂತಿಗೆ ಪ್ರಣಾಳಿಕೆಯಾಗಿ ಭಗವದ್ಗೀತೆ ಸೃಷ್ಟಿಯಾಯಿತು. ಇದಕ್ಕೆ ಪುರಾವೆಯಾಗಿ ನಿರ್ವಾಣ ಪದ ಗೀತೆಯಲ್ಲಿ ಪದೇ ಪದೇ (೨.೭೨ ಮತ್ತು ೫.೨೪–-೨೬.) ಬಳಕೆಯಾಗಿರುವುದನ್ನು ಕಾಣಬಹುದು. ಗೀತೆಗಿಂತ ಹಿಂದಿನ ಬ್ರಾಹ್ಮಣ ಮತ ಗ್ರಂಥಗಳಲ್ಲಿ ನಿರ್ವಾಣ ಶಬ್ದ ಪ್ರಯೋಗವಾಗಿರುವುದು ಕಾಣುವುದಿಲ್ಲ. (ಈ ವಿಷಯವಾಗಿ ಬಲ್ಲವರು ತಿಳಿಸಿದರೆ ಕೃತಜ್ಞತೆಯಿಂದ ಈ ಅಭಿಪ್ರಾಯ ತಿದ್ದಿಕೊಳ್ಳುತ್ತೇನೆ.) ಬುದ್ಧಧಮ್ಮದಲ್ಲಿ ‘ನಿರ್ವಾಣ’, ಆಧ್ಯಾತ್ಮಿಕ ಅನುಭವದ ಅತ್ಯುನ್ನತ ಸ್ಥಿತಿ ಎಂಬುದು ಗೊತ್ತಿರುವ ವಿಚಾರ.

ಭಗವದ್ಗೀತೆ ಹೇಳುವವನು ಕೃಷ್ಣ, ಕೇಳುವವನು ಅರ್ಜುನ, ಬರೆಯುವವನು ವ್ಯಾಸ. - ಮೂವರೂ ಅಬ್ರಾಹ್ಮಣರು. ಕೃಷ್ಣ ಗೊಲ್ಲ (ಯಾದವ), ಅರ್ಜುನ ಕ್ಷತ್ರಿಯ, ವ್ಯಾಸ ಬೆಸ್ತ (ಮೀನುಗಾರ್ತಿಯ ಮಗ).

ಮೇಲುನೋಟಕ್ಕೆ ಗೀತೆ ವೈದಿಕರ ಕೃತಿಯಲ್ಲ ಎಂಬ ಭ್ರಮೆ ಉಂಟಾಗುವುದು ಸಹಜ. ಆದರೆ ಗೀತೆಯಲ್ಲಿ ತುಂಬಿರುವುದೆಲ್ಲ ಬ್ರಾಹ್ಮಣ ಮತವೇ ಹೊರತು ಬೇರಾವುದೂ ಅಲ್ಲ. ಭಗವದ್ಗೀತೆ ಜಾತಿ ವ್ಯವಸ್ಥೆಯನ್ನು ಏಕೆ ಪ್ರಬಲವಾಗಿ ಪ್ರತಿಪಾದಿಸುತ್ತದೆ ಎಂದರೆ ಅದಕ್ಕೆ ಐತಿಹಾಸಿಕ ಮತ್ತು ಸಾಮಾಜಿಕ ಕಾರಣಗಳಿವೆ. ಭಗವದ್ಗೀತೆ ಪ್ರಾರಂಭವಾಗುವುದೇ ಕುಲಕ್ಷಯ (೧.೩೮–-೪೦ ಜಾತಿ ನಾಶ), ವರ್ಣಸಂಕರ (೧.೪೧–-೪೪ ಜಾತಿ ಬೆರಕೆ)ಗಳನ್ನು ತಡೆಗಟ್ಟುವುದಕ್ಕಾಗಿ. ಕುಲಕ್ಷಯ ಮತ್ತು ವರ್ಣಸಂಕರಗಳನ್ನು ತಡೆಯಬೇಕೆಂದು ಅರ್ಜುನ ‘ನಾನು ಯುದ್ಧ ಮಾಡುವುದಿಲ್ಲ’ ಎಂದು ಕೃಷ್ಣನಿಗೆ ಹೇಳಿ ಬಿಲ್ಲುಬಾಣಗಳನ್ನು ರಥದಲ್ಲಿ ಹಾಕಿ ಕುಳಿತುಕೊಳ್ಳುತ್ತಾನೆ.

ಗೀತೆ ಬಹಳ ಪ್ರಖ್ಯಾತವಾಗಲು ಮಹಾತ್ಮ ಗಾಂಧೀಜಿ ಅವರ ಪ್ರಚಾರ ಕಾರಣ ಎನ್ನಬೇಕು. ‘ಕರ್ಮ ಮಾಡುವುದಕ್ಕೆ ನಿನಗೆ ಅಧಿಕಾರ, ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡು ’ಎಂದು ಕೃಷ್ಣ ಹೇಳುತ್ತಾನೆ. ಆಳು ಜೀತ ಮಾಡುತ್ತಾನೆ, ಲಾಭವೆಲ್ಲ ಯಜಮಾನನಿಗೇ ಹೋಗುತ್ತದೆ. ದುಡಿಮೆಗಾರನಿಗೆ ದುಡಿದದ್ದೇ ಲಾಭ! ಹೀಗಾಗಿ ಕೃಷ್ಣನದು ಜೀತಗಾರಿಕೆ ಮುಂದುವರಿಸುವ ಮಾತು. ಗೀತೆ ಶ್ರಮಜೀವಿಗಳನ್ನು ತುಳಿಯುವ ಸಂದೇಶ ಸಾರುತ್ತಿದೆ.

ಲೋಕದಲ್ಲಿರುವ ಅನ್ಯಾಯ, ಅಸಮಾನತೆ, ಸುಲಿಗೆ, ಶೋಷಣೆ, ದಾಸ್ಯ, ಪಾರತಂತ್ರ್ಯ, ದಬ್ಬಾಳಿಕೆ, ಬಡತನ, ಮೋಸ, ಮೇಲು ಕೀಳು, ಜಾತಿ ವ್ಯವಸ್ಥೆ, ಅಸ್ಪೃಶ್ಯತೆ ಮುಂತಾದವುಗಳನ್ನೆಲ್ಲ ಹೋಗಲಾಡಿಸುವುದು ಹೇಗೆ? ಇದಕ್ಕೆ ಗೀತೆಯಲ್ಲಿ ಉತ್ತರವಿಲ್ಲ.

‘ಮನುಸ್ಮೃತಿ’ಗಿಂತ (ಕ್ರಿ.ಪೂ.೧೮೫) ಭಗವದ್ಗೀತೆ (ಕ್ರಿ.ಶ. ಮೂರನೆಯ ಶತಮಾನ) ಹೆಚ್ಚು ಭಯಂಕರವಾದ ಗ್ರಂಥ. ಮನುಸ್ಮೃತಿ ಒರಟಾಯಿತು ಎಂದೇನೋ ಮೃದು ಮಧುರವಾದ ಸಂಗೀತಮಯ ಕಾವ್ಯಭಾಷೆಯಲ್ಲಿ ಭಗವದ್ಗೀತೆಯನ್ನು ಬರೆಯಲಾಗಿದೆ. ಓದುಗರನ್ನು
ಆಕರ್ಷಿಸಲು ಮಾಡಿರುವ ಉಪಾಯ ಇದು. ಗೀತೆಯದು ಬಹಳ ಸುಂದರವಾದ ಭಾಷೆ. ಆದರೆ ಅದೆಲ್ಲ ಅಪಾಯಕಾರಿಯಾಗಿರುವುದನ್ನು ಅರಿಯಬೇಕಾಗಿದೆ.

ಭಗವದ್ಗೀತೆಯಲ್ಲಿರುವ ‘ವಿಶ್ವರೂಪ ದರ್ಶನ’ದಲ್ಲಿ ನೀಡಿರುವ ವಿವರಗಳು ಭಾರತಕ್ಕೆ ಸೀಮಿತಗೊಂಡಿವೆ. ವಿದೇಶಗಳ ಹೆಸರುಗಳು ಇಲ್ಲಿ ಬಂದಿಲ್ಲ. ಆದ್ದರಿಂದ ಇದನ್ನು ವಿಶ್ವರೂಪ ದರ್ಶನ ಎನ್ನದೆ ‘ಸಂಕ್ಷಿಪ್ತ ಭಾರತ ದರ್ಶನ’ ಎಂದು ಕರೆಯುವುದು ಸೂಕ್ತ. ಗೀತಕಾರನ ಭೌಗೋಳಿಕ ಜ್ಞಾನವೆಲ್ಲ ಕೇವಲ ಭರತಖಂಡಕ್ಕೆ ಸೀಮಿತವಾಗಿದೆ. ಗೀತೆ ರಚನೆಯಾಗುವುದಕ್ಕಿಂತ ಮುನ್ನವೇ ಚಾಲ್ತಿಯಲ್ಲಿ ಇದ್ದ ಎಲ್ಲಾ ತತ್ವಶಾಖೆಗಳ ಪುನರುಚ್ಚಾರ ಗೀತೆಯಲ್ಲಿ ಬಂದಿದೆ. ಗೀತೆಯ ಒಂದೊಂದು ಅಧ್ಯಾಯದಲ್ಲಿ ಒಂದೊಂದು ತತ್ವವನ್ನು ಹೇಳಲಾಗಿದೆ. ಒಂದು ಅಧ್ಯಾಯಕ್ಕೂ ಇನ್ನೊಂದು ಅಧ್ಯಾಯಕ್ಕೂ ಸಂಬಂಧವಿಲ್ಲ. ಭಗವದ್ಗೀತೆಯಲ್ಲಿ ಹೊಸ ಬೆಳಕಿಲ್ಲ. ಅದರಲ್ಲಿ ಜಾತಿವ್ಯವಸ್ಥೆಯ ಸಮರ್ಥನೆ ತುಂಬಿದೆ. ಗೀತೆ ಹಿಂದೂ ದರ್ಶನಗಳ ಒಂದು ಕೋಷ್ಟಕ ಅಥವಾ ಅಡಕ ಅಷ್ಟೆ.

ಕೃಷ್ಣ ತಪಸ್ಸು ಮಾಡಿ ನಿಜವಾದ ಆಧ್ಯಾತ್ಮ ಜ್ಞಾನ ಗಳಿಸಿದ್ದ ಎಂಬುದಕ್ಕೆ ಗೀತೆಯಲ್ಲಿ ವಿವರಗಳಿಲ್ಲ. ಬುದ್ಧ ತನ್ನ ‘ಸುತ್ತ’ಗಳಲ್ಲಿ, ಪರಮಹಂಸರ ‘ಶ್ರೀರಾಮಕೃಷ್ಣ ವಚನವೇದ’ದಲ್ಲಿ, ವಿವೇಕಾನಂದರು ತಮ್ಮ ಬರಹಗಳಲ್ಲಿ ಸಾಕ್ಷಾತ್ಕಾರ ಪಡೆಯಲು ನಡೆಸಿದ ಶ್ರಮಗಳನ್ನು ವಿವರಿಸಿದ್ದಾರೆ. ಕೃಷ್ಣನಿಗೆ ಇಂಥ ಅನುಭವ ಆಗಿಲ್ಲ. ಅವನು ಕಿರಿಯವನಾಗಿದ್ದಾಗ ಗೋಪಿಕೆಯರ ಸಂಗಡದಲ್ಲಿದ್ದ. ತಾರುಣ್ಯದಲ್ಲಿ ಅಷ್ಟ ಮಹಿಷಿಯರು ಮತ್ತು ಹದಿನಾರು ಸಾವಿರ ಹೆಂಡತಿಯರ ಜೊತೆಗಿದ್ದ. ಕೊನೆಗೆ ಕುರುಕ್ಷೇತ್ರದಲ್ಲಿ ಅರ್ಜುನನ ಸಾರಥಿಯಾಗಿ ರಥ ನಡೆಸಿದ. ಇಂಥವನು ಹೇಗೆ ಅಧ್ಯಾತ್ಮ ಜೀವಿಯಾಗುತ್ತಾನೆ? ಅಧ್ಯಾತ್ಮ ಜೀವನಕ್ಕೆ ಪರಿಶುದ್ಧತೆ, ಕಾಮನಿಗ್ರಹ ಅತ್ಯಂತ ಅವಶ್ಯಕ. ಇದಾವುದೂ ಇಲ್ಲದ ಕೃಷ್ಣ ಜ್ಞಾನಿ ಅಲ್ಲ. ದೇವರಾಗಲು ಕೃಷ್ಣನಿಗೆ ಯಾವ ಅರ್ಹತೆಯೂ ಇಲ್ಲ. ಏಕೆಂದರೆ ಕೃಷ್ಣನಿಗೆ ಪಾವಿತ್ರ್ಯವಿಲ್ಲ, ಇಂದ್ರಿಯ ನಿಗ್ರಹ ಇಲ್ಲ, ಪರಮ ಜ್ಞಾನವಿಲ್ಲ.

ಸ್ವಧರ್ಮವನ್ನು ವ್ಯಾಖ್ಯಾನಕಾರರು ಮನಸೋ ಇಚ್ಛೆ ವಿವರಿಸಿದ್ದಾರೆ. ಈ ಪದವನ್ನು ಗೀತೆಯ ಸಂದರ್ಭದಲ್ಲೇ ಅರ್ಥ ಮಾಡಿಕೊಳ್ಳುವುದು ಒಳ್ಳೆಯದು. ಗೀತೆಯ ಚೌಕಟ್ಟಿನಲ್ಲಿ ಸ್ವಧರ್ಮ ಎಂದರೆ ಜಾತಿ ಎಂದೇ ಅರ್ಥ ನಿರ್ಣಯವಾಗುತ್ತದೆ.

‘ಯುದ್ಧವು ಕ್ಷತ್ರಿಯನಿಗೆ ಸ್ವಧರ್ಮ ಎಂದು ತಿಳಿದ ನಂತರವೂ ನೀನು ಯುದ್ಧ ಮಾಡದಿದ್ದರೆ ಸ್ವಧರ್ಮವನ್ನೂ ಕೀರ್ತಿಯನ್ನೂ ಹಾಳು ಮಾಡಿಕೊಂಡು ಪಾಪವನ್ನು ಪಡೆಯುತ್ತೀಯೆ. ಆದ್ದರಿಂದ ನೀನು ಯುದ್ಧ ಮಾಡು ’ಎಂದು ಅರ್ಜುನನಿಗೆ ಕೃಷ್ಣ ಪುಸಲಾಯಿಸುತ್ತಾನೆ. ಹಾಗಾಗಿ ಸ್ವಧರ್ಮ ಎಂದರೆ ಕ್ಷತ್ರಿಯ ಜಾತಿ, ಮತ್ತು ಪ್ರತಿಯೊಬ್ಬನ ಜಾತಿ ಎಂದು ಅರ್ಥ ಬರುತ್ತದೆ. ಕ್ಷತ್ರಿಯ ಧರ್ಮದ ಪ್ರಕಾರ ಕೊಲ್ಲಲು ಪ್ರೇರೇಪಿಸುವ ಕೃಷ್ಣನನ್ನು ದೇವರು ಮಾಡಲಾಗಿದೆ. ಅಪರಾಧ ಕಾನೂನು ಸಂಹಿತೆ ದೃಷ್ಟಿಯಲ್ಲಿ ದುಷ್ಟ ಕೃತ್ಯ ಪ್ರೇರಕ ಕೃಷ್ಣ ತಪ್ಪಿತಸ್ಥ, ಅಪರಾಧಿ. ಇಂಥ ‘ಭಗವದ್ಗೀತೆ’ಯನ್ನು ರಾಷ್ಟ್ರದ ಧರ್ಮ ಗ್ರಂಥ ಎಂದು ಕೇಂದ್ರ ಸರ್ಕಾರ ಘೋಷಿಸಿದರೆ ಹತ್ಯೆ ಮಾಡುವ ಮನಸ್ಸುಳ್ಳ ಪಕ್ಷ ಮತ್ತು ಸಂಘಟನೆಗಳಿಗೆ ಹಾಗೂ ಜನರಿಗೆ ರಾಜ ರಹದಾರಿ ನೀಡಿದಂತಾಗುತ್ತದೆ. ಯಾವ ದೃಷ್ಟಿಯಿಂದ ನೋಡಿದರೂ ಭಗವದ್ಗೀತೆ ರಾಷ್ಟ್ರೀಯ ಧರ್ಮ ಗ್ರಂಥವಾಗಲು ಲಾಯಕ್ಕಾಗಿಲ್ಲ.

ವಿಜ್ಞಾನ ಚಂದ್ರಲೋಕ, ಮಂಗಳ ಲೋಕಗಳಿಗೆ ಹೋಗಿ ಬಂದಿದೆ. ಧರ್ಮ ಗ್ರಂಥಗಳು ಹೇಳುವ ಸ್ವರ್ಗ, ಕೈಲಾಸ, ವೈಕುಂಠ ಅಲ್ಲಿ ಕಂಡು ಬಂದಿಲ್ಲ. ಮುಕ್ತಿ, ಸದ್ಗತಿ ಮುಂತಾದ ಮಾತುಗಳನ್ನು ಎಲ್ಲಾ ಮತಗ್ರಂಥಗಳು ಹೇಳುತ್ತವೆ. ಗೀತೆಯೂ ಅದನ್ನೇ ಉಚ್ಚರಿಸುತ್ತದೆ. ವಾಸ್ತವವಾಗಿ ಇರುವುದು ಇದೊಂದೇ ಲೋಕ; ಇಲ್ಲಿ ನಾವೆಲ್ಲರೂ ಸುಖ, ಶಾಂತಿ, ಸಾಮರಸ್ಯದಿಂದ ಬದುಕುವುದನ್ನು
ರೂಢಿಸಿಕೊಳ್ಳಬೇಕು ಎಂದು ಭಾವಿಸುವುದು ವಿವೇಕಯುತ.

ಕೃಷ್ಣ ಚಾತುರ್ವರ್ಣ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದರಿಂದ ಅವನನ್ನು ದೇವರನ್ನಾಗಿ ಮಾಡಲಾಗಿದೆ. ಇಲ್ಲದಿದ್ದರೆ ಅವನನ್ನೂ ಜಾತಿಯನ್ನು ನಿರಾಕರಿಸಿದ ಬುದ್ಧನನ್ನು ತಿರಸ್ಕರಿಸಿದಂತೆ ತಿರಸ್ಕರಿಸುತ್ತಿದ್ದರು. ಮನುಷ್ಯರೆಲ್ಲ ಒಂದೇ ಎಂದು ಬೋಧಿಸುವ ಧರ್ಮಗ್ರಂಥ ‘ಧಮ್ಮಪದ ’ ಒಂದೇ.

ಭಗವದ್ಗೀತೆ ಪರಿಪೂರ್ಣ ಗ್ರಂಥ ಅಲ್ಲ. ಭಗವದ್ಗೀತೆ ಸಂಪ್ರದಾಯವನ್ನು ಸ್ಥಿರೀಕರಿಸುವ ಪ್ರಗತಿ ವಿರೋಧಿ ಗ್ರಂಥ. ಭಗವದ್ಗೀತೆ ಶೇ. ೯೮ ಮಂದಿಗೆ ಸಂಪೂರ್ಣ ಆಘಾತಕಾರಿಯಾಗಿದೆ. ಉಳಿದ ಶೇ. ೨ರಷ್ಟು ಜನರಿಗೆ ಮಾತ್ರ ಅನುಕೂಲವಾಗಿ-ರುವುದು. ಇವರು ಪುಣ್ಯಯೋನಿಜರಾದುದರಿಂದ ಏನು ಕೇಡು ಮಾಡಿದರೂ ಅದು ತಪ್ಪಲ್ಲ! ಪಾಪಯೋನಿಜರು ಎಷ್ಟೇ ಒಳ್ಳೆಯ ಕೆಲಸ ಮಾಡಿದರೂ ಅವರಿಗೆ ಏಳಿಗೆ ಇಲ್ಲ! ಎಂಥ ಭಯಂಕರ ತತ್ವಜ್ಞಾನ ಕೃಷ್ಣನದು! ಇಂಥ ಭಗವದ್ಗೀತೆ ಹೇಗೆ ಪವಿತ್ರ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.