ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ ಬರಹ ಸುಲಭವಾಗಿ ದಕ್ಕಲಿ

Last Updated 3 ನವೆಂಬರ್ 2020, 19:30 IST
ಅಕ್ಷರ ಗಾತ್ರ

ಡಾ. ಬಿ.ಆರ್.ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳನ್ನು ಒಳಗೊಂಡ ಸಂವಿಧಾನ ರಚನಾ ಸಮಿತಿಯ ನಡಾವಳಿಗಳ 22 ಸಂಪುಟಗಳ ಮರು ಮುದ್ರಣವನ್ನು ತಕ್ಷಣವೇ ಆರಂಭಿಸಿ ಓದುಗರಿಗೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆ.

ಅಂಬೇಡ್ಕರ್ ಅವರ ಜೀವನಚರಿತ್ರೆಯ ವಿವಿಧ ಆಯಾಮಗಳನ್ನು ಹೊಂದಿರುವ ಅವರ ಬರಹ ಮತ್ತು ಭಾಷಣದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮುತುವರ್ಜಿ ವಹಿಸಿ, ಈ ಕಾರ್ಯವನ್ನು ನಮ್ಮ ದೇಶವು ಸಂವಿಧಾನವನ್ನು ಅಳವಡಿಸಿಕೊಂಡ ದಿನವಾದ ನ. 26ರ ಒಳಗೆ ಮುದ್ರಿಸಿ ಓದುಗರಿಗೆ ಒದಗಿಸಲು ಕ್ರಮ ಕೈಗೊಳ್ಳಬೇಕು. ಹಾಗೇ ಈ ಪ್ರತಿಗಳು ತಾಲ್ಲೂಕು ಮಟ್ಟದ ಮಿನಿ ವಿಧಾನಸೌಧದ ಕೊಠಡಿಗಳಲ್ಲಿ ದೊರೆಯುವಂತೆ ಆಗಬೇಕು. ಏಕೆಂದರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಕಚೇರಿಗೆ ಹೋಗಿ ಕೃತಿ ಖರೀದಿಸಿ ತರಲು ಎಲ್ಲರಿಗೂ ಸಾಧ್ಯವಾಗದೇ ಇರಬಹುದು.

- ಭೀಮಾಶಂಕರ ದಾದೆಲಿ ಹಳಿಸಗರ,ಶಹಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT