ಹುಬ್ಬಳ್ಳಿ– ಧಾರವಾಡದಲ್ಲಿ ಹಿಂಸಾಚಾರ

ಧಾರವಾಡ, ಜೂನ್ 16– ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಆರಂಭಕ್ಕೆ ಅನುಮತಿ ನಿರಾಕರಿಸಿರುವುದನ್ನು ಪ್ರತಿಭಟಿಸಿ ಸ್ಫೋಟಗೊಂಡಿರುವ ಚಳವಳಿ ಇಂದು ಹಿಂಸಾಚಾರಕ್ಕೆ ತಿರುಗಿತು. ನಗರದಲ್ಲಿ ಕಲ್ಲು ತೂರಾಟ ಹಾಗೂ ಹಲ್ಲೆ ನಡೆದರೆ, ಹುಬ್ಬಳ್ಳಿಯ ನ್ಯಾಯಾಲಯದ ಆವರಣದಲ್ಲಿ ಹಿಂಸಾಚಾರಕ್ಕೆ ಇಳಿದ ವಕೀಲರ ಮೇಲೆ ಲಾಠಿ ಪ್ರಹಾರ ಮಾಡಿದ್ದರಿಂದ ಪರಿಸ್ಥಿತಿ ಉದ್ವಿಗ್ನ ಗೊಂಡಿತು.

ಕಲ್ಲು ತೂರಾಟದಲ್ಲಿ ಕೆಲವರಿಗೆ ಗಾಯಗಳಾಗಿವೆ. ಹಲವರ ಬಟ್ಟೆ ಹರಿದಿದೆ. ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು. ಪುಣೆ– ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ತಡೆ ಚಳವಳಿ ನಡೆಯಿತು. ಹುಬ್ಬಳ್ಳಿಯಲ್ಲಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.