25 ವರ್ಷಗಳ ಹಿಂದೆ | ಬುಧವಾರ, 21–1–1998

ಮೂವರು ಸಚಿವರ ರಾಜೀನಾಮೆ ಬಿಕ್ಕಟ್ಟಿನಲ್ಲಿ ಪಟೇಲ್ ಸರ್ಕಾರ
ಬೆಂಗಳೂರು, ಜ. 20– ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಸಂಪುಟದ ಮೂವರು ಸಚಿವರು ಇಂದು ರಾಜೀನಾಮೆ ನೀಡಿ, ಮಾಜಿ ಮುಖ್ಯಮಂತ್ರಿ ಹಾಗೂ ಲೋಕಶಕ್ತಿ ಮುಖಂಡ ರಾಮಕೃಷ್ಣ ಹೆಗಡೆ ನೇತೃತ್ವದ ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ಸೇರಿರುವುದರಿಂದ ಮೂರು ವರ್ಷದ ಜನತಾದಳ ಸರ್ಕಾರ ತೀವ್ರ ಬಿಕ್ಕಟ್ಟಿಗೆ ಸಿಲುಕಿದೆ.
ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ, ಕಂದಾಯ ಸಚಿವ ರಮೇಶ್ ಜಿಗಜಿಣಗಿ ಹಾಗೂ ಕ್ರೀಡಾ ಸಚಿವ ಅಜಯ್ ಕುಮಾರ್ ಸರ್‌ನಾಯಕ್ ಅವರು ಬೆಳಿಗ್ಗೆ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.