ಡಾ.ರಾಜ್‌ಕುಮಾರ್‌ಗೆ ಪ್ರತಿಷ್ಠಿತ ಫಾಲ್ಕೆ ಪ್ರಶಸ್ತಿ

ಬೆಂಗಳೂರು, ಜುಲೈ 31– ಕನ್ನಡ ಚಿತ್ರರಂಗದ ಮೇರು ನಟಡಾ. ರಾಜ್‌ಕುಮಾರ್ ಅವರನ್ನು 1995ರ ‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

‘ಫಾಲ್ಕೆ ಪ್ರಶಸ್ತಿಗೆ ಡಾ.ರಾಜ್‌ಕುಮಾರ್ ಅವರು ಆಯ್ಕೆಯಾಗಿದ್ದಾರೆ ಮತ್ತು ದೆಹಲಿಯಲ್ಲಿ ಆ. 6ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ವಾರ್ತಾ ಸಚಿವರು ತಮಗೆ ದೂರವಾಣಿ ಮುಖಾಂತರ ತಿಳಿಸಿದರು ಎಂದು ರಾಜ್‌ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್‌ಕುಮಾರ್ ಅವರು ಪ್ರಜಾವಾಣಿಗೆ ತಿಳಿಸಿದರು.

ಚಲನಚಿತ್ರೋದ್ಯಮದ ಸರ್ವಾಂಗೀಣ ಅಭಿವೃದ್ಧಿಗಾಗಿ ದುಡಿದವರಿಗೆ ಕೇಂದ್ರ ಸರ್ಕಾರ ‘ಭಾರತೀಯ ಚಲನಚಿತ್ರರಂಗದ ಪಿತಾಮಹ’ ಫಾಲ್ಕೆ ಅವರ ಸ್ಮಾರಕವಾಗಿ ನೀಡುವ ರಾಷ್ಟ್ರಮಟ್ಟದ ಈ ಪ್ರಶಸ್ತಿ ಲಕ್ಷ ರೂಪಾಯಿ ನಗದು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.