ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಸಾಹಿತಿ ಶಾಂತಿನಾಥ ದೇಸಾಯಿ ಇನ್ನಿಲ್ಲ

Last Updated 26 ಮಾರ್ಚ್ 2023, 20:33 IST
ಅಕ್ಷರ ಗಾತ್ರ

ಸಾಹಿತಿ ಶಾಂತಿನಾಥ ದೇಸಾಯಿ ಇನ್ನಿಲ್ಲ

ಬೆಂಗಳೂರು, ಮಾರ್ಚ್‌ 26– ಆಧುನಿಕ ಕನ್ನಡ ಸಾಹಿತ್ಯದ ಪ್ರಖ್ಯಾತ ಲೇಖಕ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ.ಶಾಂತಿನಾಥ ದೇಸಾಯಿ (70) ಅವರು ಇಂದು ಕೊಲ್ಲಾಪುರದಲ್ಲಿ ನಿಧನರಾದರು.

ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ನಿವೃತ್ತಿ ಹೊಂದಿದ್ದ ಅವರು ಕೆಲವು ತಿಂಗಳಿನಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಬಿಎಸ್‌ಪಿ ಸದಸ್ಯರಿಗೆ ಆಮಿಷ ಆರೋಪ: ಕೋಲಾಹಲ

ನವದೆಹಲಿ, ಮಾರ್ಚ್‌ 26 (ಪಿಟಿಐ)– ಸಂಸತ್ತಿನಲ್ಲಿ ಬಹುಮತ ಗಳಿಸಲು ಬಿಜೆಪಿ ನೇತೃತ್ವದ ಸರ್ಕಾರ ತಮ್ಮ ಪಕ್ಷದ ಸದಸ್ಯರಿಗೆ ಆಮಿಷ ತೋರಿಸುತ್ತಿದೆ ಎಂದು ಆರೋಪಿಸಿ ಪ್ರಧಾನಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಬಿಎಸ್‌ಪಿ ಸದಸ್ಯರೊಬ್ಬರು ಯತ್ನಿಸಿದ್ದರಿಂದ ಲೋಕಸಭೆಯಲ್ಲಿ ಇಂದು ಭಾರಿ ಕೋಲಾಹಲ ಉಂಟಾಗಿ ಕಲಾಪವನ್ನು ಎರಡು ಬಾರಿ ಮುಂದೂಡಬೇಕಾಯಿತು.

ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆಯೇ ಬಿಎಸ್‌ಪಿ ಸದಸ್ಯ ಆರೀಫ್‌ ಮಹಮ್ಮದ್‌ ಖಾನ್‌ ಅವರು ಸರ್ಕಾರದ ವಿರುದ್ಧ ಆರೋಪ ಮಾಡಿದಾಗ ಸದನದಲ್ಲಿ ಗಲಾಟೆ ಆರಂಭವಾಯಿತು. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಂಡರು. ಬಿಎಸ್‌ಪಿ, ಕಾಂಗ್ರೆಸ್‌ ಮತ್ತು ಎಡಪಕ್ಷಗಳ ಸದಸ್ಯರು ಸಭಾಧ್ಯಕ್ಷ ಪೀಠದ ಬಳಿಗೆ ತೆರಳಿ ಈ ವಿಷಯದ ಬಗ್ಗೆ ಚರ್ಚೆಗೆ ಇನ್ನಷ್ಟು ಕಾಲಾವಕಾಶ ನೀಡುವಂತೆ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT