25 ವರ್ಷಗಳ ಹಿಂದೆ: ಗುರುವಾರ, 21–12–1995

ಟೆಲಿಕಾಂ ಹಗರಣ: ಜೆಪಿಸಿ ತನಿಖೆಗೆ ಪ್ರಧಾನಿ ನಕಾರ
ನವದೆಹಲಿ, ಡಿ. 20 (ಪಿಟಿಐ, ಯುಎನ್‌ಐ): ಟೆಲಿಕಾಂ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಸಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಯನ್ನು ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ತಳ್ಳಿಹಾಕಿದ್ದಾರೆ.
ಲೋಕಸಭೆಯಲ್ಲಿನ ವಿರೋಧ ಪಕ್ಷಗಳ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಜತೆಗೆ ನಡೆಸಿದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಿಯವರು ಈ ವಿಷಯ ತಿಳಿಸಿದ್ದಾರೆ. ‘ಟೆಲಿಕಾಂ ವಿವಾದಕ್ಕೆ ಸಂಬಂಧಿಸಿದಂತೆ ಜೆಪಿಸಿ ತನಿಖೆ ಮಾಡಬೇಕಾದ ಅಗತ್ಯದ ಕುರಿತು ಪ್ರಧಾನಿಯವರ ಮನವೊಲಿಸಲು ನಾನು ವಿಫಲನಾಗಿದ್ದೇನೆ’ ಎಂದು ವಾಜಪೇಯಿ ಆನಂತರ ಹೇಳಿದರು.
ಕಾವೇರಿ: ಪ್ರತಿಪಕ್ಷ, ತಜ್ಞರ ಜತೆ ಚರ್ಚೆ ನಂತರವೇ ನಿರ್ಧಾರ
ಬೆಂಗಳೂರು, ಡಿ. 20: ಕಾವೇರಿ ಜಲ ವಿವಾದ ನ್ಯಾಯಮಂಡಲಿ ತಮಿಳುನಾಡಿಗೆ 11 ಟಿಎಂಸಿ ಅಡಿ ನೀರು ಬಿಡಲು ರಾಜ್ಯ ಸರ್ಕಾರಕ್ಕೆ ನೀಡಿರುವ ಆದೇಶದ ಬಗ್ಗೆ ಕಾನೂನು ತಜ್ಞರ ಹಾಗೂ ವಿರೋಧ ಪಕ್ಷಗಳ ಮುಖಂಡರ ಜತೆಗೆ ಚರ್ಚೆ ನಡೆಸುವವರೆಗೆ ಈ ನಿಟ್ಟಿನಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರು ಇಂದು ಇಲ್ಲಿ ಸ್ಪಷ್ಟಪಡಿಸಿದರು.
ನ್ಯಾಯಮಂಡಲಿಯ ಆದೇಶದ ಬಗ್ಗೆ ಕಾನೂನು ತಜ್ಞರ ಜತೆಗೆ ಚರ್ಚಿಸಿದ ನಂತರ ಎರಡು ಮೂರು ದಿನಗಳ ಒಳಗಾಗಿ ವಿರೋಧ ಪಕ್ಷಗಳ ಮುಖಂಡರ ಸಭೆಯನ್ನು ಕರೆಯಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.