ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶುಕ್ರವಾರ, 22–12–1995

Last Updated 21 ಡಿಸೆಂಬರ್ 2020, 21:27 IST
ಅಕ್ಷರ ಗಾತ್ರ

ತೈಲಾಗಾರ ವಿರುದ್ಧ ಚಳವಳಿ: ಉದ್ರಿಕ್ತ ಗುಂಪಿನ ಮೇಲೆ ಗುಂಡು
ಮಂಗಳೂರು, ಡಿ. 21– ಮಂಗಳೂರು ತೈಲಾಗಾರ (ಎಂಆರ್‌ಪಿಎಲ್‌) ತ್ಯಾಜ್ಯ ವಸ್ತುಗಳನ್ನು ಸಮುದ್ರಕ್ಕೆ ಬಿಡಲು ಹಾಕುತ್ತಿರುವ ಪೈಪ್‌ಲೈನ್‌ ಅನ್ನು ಕೀಳಬೇಕು ಎಂದು ಒತ್ತಾಯಿಸಿ ರಸ್ತೆತಡೆ ಚಳವಳಿ ನಡೆಸುತ್ತಿದ್ದ ಮೀನುಗಾರರು ಕಲ್ಲು ತೂರಾಟ, ಬೆಂಕಿ ಹಚ್ಚುವಿಕೆಯಂತಹ ಹಿಂಸಾಕೃತ್ಯಕ್ಕೆ ಇಳಿದಿದ್ದರಿಂದ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ 9 ಜನರು ಗಾಯಗೊಂಡಿದ್ದಾರೆ.

ಗೋಲಿಬಾರ್‌ ಪ್ರತಿಭಟಿಸಿ ನಾಳೆ ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ ನೀಡಲಾಗಿದೆ.

ಪಾಲಿಕೆ, ಪುರಸಭೆ ಮೀಸಲಾತಿ ನಿಗದಿ
ಬೆಂಗಳೂರು, ಡಿ. 21– ಮಹಾನಗರಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಗಳಿಗೆ ಮೊದಲ ವರ್ಷದ ಅವಧಿಗೆ ಅನ್ವಯವಾಗುವಂತೆ ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆರು ಮಹಾನಗರಪಾಲಿಕೆಗಳಲ್ಲಿ ಹಿಂದುಳಿದ ವರ್ಗದ ‘ಎ’ ಗುಂಪಿಗೆ ಎರಡು, ‘ಬಿ’ ಗುಂಪಿಗೆ ಒಂದು, ಪರಿಶಿಷ್ಟ ಜಾತಿಯವರಿಗೆ ಒಂದು ಹಾಗೂ ಸಾಮಾನ್ಯ ವರ್ಗಕ್ಕೆ ಎರಡು ಮೇಯರ್‌ ಸ್ಥಾನಗಳು ಮೀಸಲಾಗಿವೆ. ಇದರಲ್ಲಿ ಹಿಂದುಳಿದ ವರ್ಗದ ‘ಎ’ ಗುಂಪಿಗೆ ನೀಡಿರುವ ಒಂದು ಸ್ಥಾನ ಮಹಿಳೆಗೆ ಮೀಸಲು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT