ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶನಿವಾರ, 3. 2.1996

Last Updated 2 ಫೆಬ್ರುವರಿ 2021, 19:59 IST
ಅಕ್ಷರ ಗಾತ್ರ

ದರೋಡೆಗೆ ಯತ್ನ– ಡಕಾಯಿತರ ಮೇಲೆ ಗುಂಡು

ರಾಯಚೂರು, ಫೆ. 2– ನಗರದ ವಿಜಯನಗರ ಬಡಾವಣೆಯಲ್ಲಿ ಮನೆಯೊಂದರ ಬಾಗಿಲು ಒಡೆದು ದರೋಡೆಗೆ ಯತ್ನಿಸುತ್ತಿದ್ದ ಡಕಾಯಿತರ ತಂಡದ ಮೇಲೆ ಅಲ್ಲಿನ ನಿವಾಸಿಯೊಬ್ಬರು ಗುಂಡು ಹಾರಿಸಿದ್ದರಿಂದ ದುಷ್ಕರ್ಮಿಗಳು ಪರಾರಿಯಾದ ಘಟನೆ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

ದಳ ಮೂರನೇ ಅಭ್ಯರ್ಥಿ ಯಾರು?

ಬೆಂಗಳೂರು, ಫೆ. 2– ರಾಜ್ಯಸಭಾ ಚುನಾವಣೆಗೆ ಜನತಾದಳದಿಂದ ಮೂರನೇ ಅಭ್ಯರ್ಥಿ ಯಾರಾಗಬಹುದು ಎಂಬುದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮತ್ತು ಜನತಾದಳ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದ ಸಂಸದೀಯ ಮಂಡಲಿ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ, ಮೂರನೇ ಅಭ್ಯರ್ಥಿ ಹಿಂದುಳಿದ ವರ್ಗಕ್ಕೆ ಸೇರಿದವರು ಆಗಿರಬೇಕು ಎಂಬುದರ ಬಗ್ಗೆ ಮಾತುಕತೆ ನಡೆದಿದೆ.

ಆದರೆ ಹಿಂದುಳಿದ ವರ್ಗದವರಲ್ಲಿ ಯಾರಿಗೆ ಆದ್ಯತೆ ನೀಡಬೇಕು? ಈ ಜಿಜ್ಞಾಸೆಯಿಂದಾಗಿ ಯಾರು ಅಭ್ಯರ್ಥಿ ಎಂಬುದು ಸ್ಪಷ್ಟವಾಗಿಲ್ಲ. ಪಕ್ಷದ ಹಿರಿಯ ಮುಖಂಡರೊಬ್ಬರ ಪ್ರಕಾರ, ಇನ್ನು ಒಂದೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಆಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT