ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಬುಧವಾರ 3–4–1996

Last Updated 2 ಏಪ್ರಿಲ್ 2021, 19:31 IST
ಅಕ್ಷರ ಗಾತ್ರ

ಶಂಕರಾನಂದ, ನಾಯ್ಕರ್, ವರಲಕ್ಷ್ಮಿ, ಮಾದೇಗೌಡ, ಕೃಷ್ಣರಾವ್‌ಗೆ ಟಿಕೆಟ್

ನವದೆಹಲಿ, ಏ. 2– ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಕಳೆದ 28ರಂದು ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ, ಉಳಿದ ಕ್ಷೇತ್ರಗಳ ಬಗೆಗೆ ನಾಲ್ಕು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿತ್ತಾದರೂ ಇಂದು ಮಧ್ಯಾಹ್ನದ ಹೊತ್ತಿಗೆ ಹತ್ತು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಆಖೈರುಗೊಳಿಸಿತು.

ಈ ಕ್ಷೇತ್ರಗಳ ಪೈಕಿ ಪ್ರತಿಷ್ಠಿತ ಬೆಂಗಳೂರು ದಕ್ಷಿಣಕ್ಕೆ ದಿವಂಗತ ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರ ಪತ್ನಿ ವರಲಕ್ಷ್ಮಿ ಗುಂಡೂರಾವ್, ಷೇರು ಹಗರಣದ ಹಿನ್ನೆಲೆಯಲ್ಲಿ ಮಂತ್ರಿ ಸ್ಥಾನ ತ್ಯಾಗ ಮಾಡಬೇಕಾಗಿ ಬಂದ ಬಿ.ಶಂಕರಾನಂದ ಅವರು ಮತ್ತೆ ಚಿಕ್ಕೋಡಿ ಕ್ಷೇತ್ರದಿಂದ ಮತ್ತು ಮೈಸೂರು ಕ್ಷೇತ್ರದಿಂದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅಭ್ಯರ್ಥಿಗಳಾಗಲಿದ್ದಾರೆ.

ಜಾಫರ್ ಷರೀಫ್ ಸ್ಪರ್ಧೆ ಇಲ್ಲ

ಬೆಂಗಳೂರು, ಏ. 2– ಕಾಂಗೈ ಪಕ್ಷದಿಂದ ಟಿಕೆಟ್ ಲಭಿಸದಿದ್ದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಗಲಿ ಅಥವಾ ಇನ್ನಾವುದೇ ಪಕ್ಷದ ಟಿಕೆಟ್‌ನಿಂದಾಗಲಿ ಸ್ಪರ್ಧಿಸುವುದಿಲ್ಲ ಎಂದು ಕೇಂದ್ರದ ಮಾಜಿ ರೈಲ್ವೆ ಸಚಿವ ಜಾಫರ್ ಷರೀಫ್ ಇಂದು ಸ್ಪಷ್ಟಪಡಿಸಿದ್ದಾರೆ.

‘ನಾನು ರಾಜಕೀಯವಾಗಿ ಬೆಳೆದಿರು ವುದೇ ಕಾಂಗ್ರೆಸ್‌ನಿಂದಾಗಿ. ನನಗೆ ಸ್ಪರ್ಧಿ ಸಲು ಅವಕಾಶ ನೀಡಿಲ್ಲ ಎಂಬ ಒಂದೇ ಕಾರಣದಿಂದ ಪಕ್ಷಕ್ಕೆ ದ್ರೋಹ ಬಗೆಯಲು ನಾನು ಬಯಸುವುದಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT