ಶನಿವಾರ, ಮೇ 8, 2021
26 °C

25 ವರ್ಷಗಳ ಹಿಂದೆ: ಬುಧವಾರ 17.4.1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸ ಆರ್ಥಿಕ ನೀತಿ ತಂದ ಪ್ರಗತಿ: ರಾವ್

ಮಂಗಳೂರು, ಏ. 16– ಹೊಸ ಆರ್ಥಿಕ ನೀತಿಯಿಂದ ಕಳೆದ ಐದು ವರ್ಷಗಳಲ್ಲಿ ದೇಶ ಉತ್ತಮ ಪ್ರಗತಿ ಸಾಧಿಸುತ್ತಿದ್ದು, ಈ ಪ್ರಕ್ರಿಯೆ ಇದೇ ರೀತಿ ಮುಂದುವರಿದಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಭಾರತ
ವಿಶ್ವಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗುವುದರಲ್ಲಿ ಸಂದೇಹವಿಲ್ಲ ಎಂದು ಕಾಂಗೈ ಅಧ್ಯಕ್ಷರೂ ಆದ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ಇಂದು ಇಲ್ಲಿ ಹೇಳಿದರು.

ಕರ್ನಾಟಕದ ತಮ್ಮ ಪ್ರಥಮ ಲೋಕಸಭಾ ಚುನಾವಣಾ ಪ್ರಚಾರ ಭಾಷಣವನ್ನು ಇಲ್ಲಿಯ ನೆಹರೂ ಮೈದಾನದಲ್ಲಿ ಆರಂಭಿಸಿ ಅವರು ಮಾತನಾಡಿದರು.

ಬಾಗಲಕೋಟೆ ಮುಳುಗಡೆ ಜನರ ಸ್ಥಳಾಂತರಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು, ಏ. 16– ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಗಲಕೋಟೆಯ ಮುಳುಗಡೆ ಆಗಲಿರುವ ಪ್ರದೇಶದ ಜನರನ್ನು, ಪುನರ್ವಸತಿಯ ‘ನವನಗರ’ವು ನಾಗರಿಕ ಸೌಲಭ್ಯಗಳೊಂದಿಗೆ ಸಿದ್ಧವಾಗು ವವರೆಗೆ ಸ್ಥಳಾಂತರ ಮಾಡಬಾರದು ಎಂದು ಹೈಕೋರ್ಟ್ ಇಂದು ಸರ್ಕಾರಕ್ಕೆ ಆದೇಶಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು