ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶಾಸನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ–ಪ್ರಧಾನಿ

Last Updated 24 ಏಪ್ರಿಲ್ 2021, 18:38 IST
ಅಕ್ಷರ ಗಾತ್ರ

ರಾಯಚೂರು, ಏ. 24– ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಿಕ್ಕೆ ಬಂದರೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು (ಶೇ 33ರಷ್ಟು) ಮೀಸಲಾತಿ ನೀಡಲಾಗುವುದು ಎಂದು ಕಾಂಗೈ ಅಧ್ಯಕ್ಷ ಹಾಗೂ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರು ಇಂದು ಇಲ್ಲಿ ಪ್ರಕಟಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಚುನಾವಣಾ ಭಾಷಣ ಮಾಡಿದ ರಾವ್, ‘ಈ ಮೀಸಲಾತಿಯಿಂದ ಮಹಿಳೆಯರು ಸಾಕಷ್ಟು ಕಡೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

‘ಈಗಿನ ಚುನಾವಣೆ ದೇಶದ ಭವಿಷ್ಯತ್ತಿನ ದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ ನಾವಿಂದು ವಿಚಿತ್ರವಾದ ಪರಿಸ್ಥಿತಿಯಲ್ಲಿದ್ದೇವೆ. ಜನ ಮತ ಚಲಾಯಿಸುವಾಗ ಸಾಕಷ್ಟು ಯೋಜನೆ ಮಾಡಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕು’ ಎಂದು ರಾವ್ ವಿನಂತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT