ಮಂಗಳವಾರ, ಸೆಪ್ಟೆಂಬರ್ 21, 2021
22 °C

25 ವರ್ಷಗಳ ಹಿಂದೆ: ಶುಕ್ರವಾರ 26.7.1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಸಿಇಟಿ’ ಪ್ರಥಮ ರ‍್ಯಾಂಕ್ ಬೆಂಗಳೂರು ಪಾಲು

ಬೆಂಗಳೂರು, ಜುಲೈ 25– ವೃತ್ತಿಶಿಕ್ಷಣಕ್ಕೆ ಸಂಬಂಧಿಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ವಿಭಾಗದ ಪ್ರಥಮ ರ‍್ಯಾಂಕ್ ಬೆಂಗಳೂರು ನಗರದ ವಿದ್ಯಾರ್ಥಿಗಳ ಪಾಲಾಗಿದೆ.

ರಾಜ್ಯದ ಅಭ್ಯರ್ಥಿಗಳ ಪೈಕಿ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅಧ್ಯಯನ ಮಾಡಿದ ಜೆ.ಎಸ್. ಪ್ರಕಾಶ್ ಉಮ್ಮನ್ ವೈದ್ಯಕೀಯ ವಿಭಾಗದಲ್ಲಿ ಹಾಗೂ ರಾಜಾಜಿನಗರದ ಎಸ್‌. ನಿಜಲಿಂಗಪ್ಪ ಕಾಲೇಜಿನ ವಿದ್ಯಾರ್ಥಿ ಜಿ. ಶರವಣ ಕುಮಾರ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ.‌

ಪ್ರಧಾನಿಗೆ ಸಮನ್ಸ್: ರಾಜ್ಯಸಭೆಯಲ್ಲಿ ಕೋಲಾಹಲ

ನವದೆಹಲಿ, ಜುಲೈ 25 (ಪಿಟಿಐ, ಯುಎನ್‌ಐ)– ಪ್ರಧಾನಿಯಾಗಿ ಎಚ್‌.ಡಿ. ದೇವೇಗೌಡ ಅವರನ್ನು ನೇಮಕ ಮಾಡಿರುವುದರ ಔಚಿತ್ಯವನ್ನು ಪ್ರಶ್ನಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್‌ ಹೈಕೋರ್ಟ್, ದೇವೇಗೌಡ ಅವರಿಗೆ ಸಮನ್ಸ್ ನೀಡಿರುವ ವಿಷಯ ರಾಜ್ಯಸಭೆಯಲ್ಲಿ ಇಂದು ಪ್ರಸ್ತಾಪವಾಗಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು