ಮಂಗಳವಾರ, ಸೆಪ್ಟೆಂಬರ್ 21, 2021
21 °C

25 ವರ್ಷಗಳ ಹಿಂದೆ: ಮಂಗಳವಾರ 30.7.1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾವೇರಿ 3 ತಿಂಗಳಲ್ಲಿ ಇತ್ಯರ್ಥ– ದೇವೇಗೌಡ

ಬೆಂಗಳೂರು, ಜುಲೈ 29– ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಒಪ್ಪಿಗೆ ಆಗುವ ರೀತಿಯಲ್ಲಿ ಕಾವೇರಿ ಜಲ ವಿವಾದವನ್ನು ಇನ್ನು ಮೂರು ತಿಂಗಳಲ್ಲಿ ಬಗೆಹರಿಸುವ ಭರವಸೆಯನ್ನು ‍ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರಿಗೆ ಇಂದು ಇಲ್ಲಿ ನೀಡಿದರು.

ರಾಜಭವನದಲ್ಲಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್, ಕಾನೂನು ಸಚಿವ ಎಂ.ಸಿ. ನಾಣಯ್ಯ ಹಾಗೂ ಭಾರಿ ನೀರಾವರಿ ಸಚಿವ ಕೆ.ಎನ್. ನಾಗೇಗೌಡ ಅವರೊಂದಿಗೆ, ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಆಶ್ವಾಸನೆ ನೀಡಿ ದರು ಎಂದು ಉನ್ನತ ಮೂಲಗಳು ತಿಳಿಸಿವೆ.

‘ಕಾವೇರಿ ಜಲ ವಿವಾದ ಬೀದಿಗಿಳಿದು ಬಗೆಹರಿಸುವ ವಿಚಾರ ಅಲ್ಲ. ಎರಡೂ ರಾಜ್ಯಗಳಿಗೂ ಒಪ್ಪಿಗೆ ಆಗುವ ರೀತಿಯಲ್ಲಿ ಇತ್ಯರ್ಥ ಪಡಿಸಬೇಕಾಗಿದೆ’ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಮೇಕೆದಾಟು ವಿದ್ಯುತ್ ಯೋಜನೆಯೂ ಪ್ರಸ್ತಾಪಕ್ಕೆ ಬಂದಿತು ಎಂದು ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು