ಮಂಗಳವಾರ, ಸೆಪ್ಟೆಂಬರ್ 28, 2021
22 °C

25 ವರ್ಷಗಳ ಹಿಂದೆ: ಗುರುವಾರ, 1-08-1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಾ.ರಾಜ್‌ಕುಮಾರ್‌ಗೆ ಪ್ರತಿಷ್ಠಿತ ಫಾಲ್ಕೆ ಪ್ರಶಸ್ತಿ

ಬೆಂಗಳೂರು, ಜುಲೈ 31– ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್‌ ಅವರನ್ನು 1995ರ ‘ಪ್ರತಿಷ್ಠಿತ ದಾದಾ ಸಾಹೇಬ್‌ ಫಾಲ್ಕೆ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

‘ಫಾಲ್ಕೆ ಪ್ರಶಸ್ತಿಗೆ ಡಾ.ರಾಜ್‌ಕುಮಾರ್‌ ಅವರು ಆಯ್ಕೆಯಾಗಿದ್ದಾರೆ ಮತ್ತು ದೆಹಲಿಯಲ್ಲಿ ಆ. 6ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ವಾರ್ತಾ ಸಚಿವರು ತಮಗೆ ದೂರವಾಣಿ ಮುಖಾಂತರ ತಿಳಿಸಿದರು ಎಂದು ರಾಜ್‌ಕುಮಾರ್‌ ಅವರ ಪತ್ನಿ ಪಾರ್ವತಮ್ಮ ರಾಜ್‌ಕುಮಾರ್‌ ಅವರು ಪ್ರಜಾವಾಣಿಗೆ ತಿಳಿಸಿದರು.

ಚಲನಚಿತ್ರೋದ್ಯಮದ ಸರ್ವಾಂಗೀಣ ಅಭಿವೃದ್ಧಿಗಾಗಿ ದುಡಿದವರಿಗೆ ಕೇಂದ್ರ ಸರ್ಕಾರ ‘ಭಾರತೀಯ ಚಲನಚಿತ್ರರಂಗದ ಪಿತಾಮಹ’ ಫಾಲ್ಕೆ ಅವರ ಸ್ಮಾರಕವಾಗಿ ನೀಡುವ ರಾಷ್ಟ್ರಮಟ್ಟದ ಈ ಪ್ರಶಸ್ತಿ ಲಕ್ಷ ರೂಪಾಯಿ ನಗದು ಒಳಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು