ಭಾರತ ಅಣ್ವಸ್ತ್ರ ತಯಾರಿಸದು– ಪ್ರಧಾನಿ
ಟೋಕಿಯೊ, ಸೆ. 11 (ಪಿಟಿಐ)– ಭಾರತ ಅಣ್ವಸ್ತ್ರಗಳನ್ನು ತಯಾರಿಸುವುದಿಲ್ಲ ಹಾಗೂ ಅಣ್ವಸ್ತ್ರ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಜಪಾನಿನ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ‘ಭಾರತದ ಅಣುಶಕ್ತಿ ಕಾರ್ಯಕ್ರಮ ಕೇವಲ ವಿದ್ಯುತ್ ಉತ್ಪಾದನೆಗೆ ಮಾತ್ರ ಸೀಮಿತ’ ಎಂದು ಪುನರುಚ್ಚರಿಸಿದ್ದಾರೆ.
ಭಾರತಕ್ಕೆ ಎಚ್ಚರಿಕೆ: ಸಮಗ್ರ ಅಣ್ವಸ್ತ್ರ ನಿಷೇಧ ಒಪ್ಪಂದಕ್ಕೆ (ಸಿಟಿಬಿಟಿ) ಸಹಿ ಹಾಕದೇ ಅಣ್ವಸ್ತ್ರ ಪರೀಕ್ಷೆ ನಡೆಸುವುದು ಅಂತರ ರಾಷ್ಟ್ರೀಯ ಸಮುದಾಯ ಮತ್ತು ವಿಶ್ವದ ಬಲಿಷ್ಠ ಶಕ್ತಿಗಳ ಹಿತಕ್ಕೆ ವಿರುದ್ಧವಾದುದು ಎಂದು ಅಮೆರಿಕದ ಅಧಿಕೃತ ವಕ್ತಾರ ನಿಕೋಲಸ್ ಬರ್ನ್ಸ್ ಹೇಳಿದ್ದಾರೆ.
‘ಸಿಟಿಬಿಟಿಯನ್ನು ವಿರೋಧಿಸುತ್ತಿರುವ ಭಾರತ ಮತ್ತು ಇತರ ರಾಷ್ಟ್ರಗಳು ತಾವು ಅಂತರರಾಷ್ಟ್ರೀಯ ಸಮುದಾಯವನ್ನು ವಿರೋಧಿಸುತ್ತಿದ್ದೇವೆ ಎಂಬ ಹಿನ್ನೆಲೆಯಲ್ಲಿ ಈ ಬಗ್ಗೆ ಇನ್ನೊಮ್ಮೆ ವಿಚಾರ ಮಾಡುವುದು ಒಳ್ಳೆಯದು’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.