ಶನಿವಾರ, ಅಕ್ಟೋಬರ್ 23, 2021
24 °C

25 ವರ್ಷಗಳ ಹಿಂದೆ: ಬುಧವಾರ 25–9–1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇಂದ್ರ ಸರ್ಕಾರಕ್ಕೆ ಬೆಂಬಲ ಅಚಲ: ಸೀತಾರಾಂ ಕೇಸರಿ
ನವದೆಹಲಿ, ಸೆ. 24 (ಯುಎನ್‌ಐ)–
ಸಂಯುಕ್ತರಂಗ ಸರ್ಕಾರಕ್ಕೆ ಬೆಂಬಲ ನೀಡುವ ಪಕ್ಷದ ನಿರ್ಧಾರವನ್ನು ಪುನರ್‌ ಪರಿಶೀಲಿಸುವ ಪ್ರಶ್ನೆಯೇ ಇಲ್ಲ ಎಂದು ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಸೀತಾರಾಂ ಕೇಸರಿ ಇಂದು ಇಲ್ಲಿ ಸ್ಪಷ್ಟಪಡಿಸಿದರು.

ಪಕ್ಷಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರಸಿಂಹ ರಾವ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್‌ ಕಾರ್ಯಕಾರಿಣಿಯು ಸರ್ಕಾರವನ್ನು ಬೆಂಬಲಿಸುವ ನಿರ್ಧಾರ ಕೈಗೊಂಡಿತು ಎಂದು ಹೇಳಿದರು.

ಜೂನ್‌ನಿಂದ ಸಾರಾಯಿ ನಿಷೇಧ: ಮುಖ್ಯಮಂತ್ರಿ
ಬೆಂಗಳೂರು, ಸೆ. 24–
ಮುಂದಿನ ಜೂನ್‌ನಿಂದ ಸಾರಾಯಿ ನಿಷೇಧಕ್ಕೆ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ ಇಂದು ಘೋಷಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು