ಬೆಂಗಳೂರು, ಆಗಸ್ಟ್ 17– ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದೇ ಆದರೆ ಅವರ ವಿರುದ್ಧ ಕೇಂದ್ರದ ಮಾಜಿ ಸಚಿವ ಎಂ. ರಾಜಶೇಖರ ಮೂರ್ತಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.
ನಾಮಪತ್ರ ಸಲ್ಲಿಸಲು ರಾಜಶೇಖರ ಮೂರ್ತಿ ಅವರು ಇಂದು ರೈಲಿನಲ್ಲಿ ಬಳ್ಳಾರಿಗೆ ಪ್ರಯಾಣಿಸಿದರು. ಸೋನಿಯಾ ಅವರು ನಾಳೆ ನಾಮಪತ್ರ ಸಲ್ಲಿಸಿದರೆ ಮೂರ್ತಿ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಾರೆ; ಇಲ್ಲದಿದ್ದಲ್ಲಿ ನಾಮಪತ್ರ ಸಲ್ಲಿಸದೆ ಹಿಂತಿರುಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.