ಬೆಂಗಳೂರು, ಆ. 16– ಭಾರತೀಯ ಜನತಾಪಕ್ಷ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವನ್ನು (ಎನ್‌ಡಿಎ) ಸೇರುವ ಜನತಾದಳದ (ಯುನೈಟೆಡ್) ಮುಖಂಡರ ಪ್ರಯತ್ನ ವಿಫಲವಾಗಿದೆ.

ಜನತಾದಳವನ್ನು ಎನ್‌ಡಿಎ ಜತೆ ಸೇರಿಸಿಕೊಳ್ಳುವ ಮತ್ತು ಬಿಜೆಪಿ ಜತೆ ಸ್ಥಾನ ಹೊಂದಾಣಿಕೆ ವಿಚಾರವಾಗಿ ಲೋಕಶಕ್ತಿ ನಾಯಕ ರಾಮಕೃಷ್ಣ ಹೆಗಡೆ ಹಾಗೂ ಸಮತಾ ಪಕ್ಷದ ನಾಯಕ ಜಾರ್ಜ್ ಫರ್ನಾಂಡಿಸ್ ಅವರು ಇಂದು ದೆಹಲಿಯಲ್ಲಿ ಬಿಜೆಪಿ ಮುಖಂಡರ ಜತೆ ನಡೆಸಿದ ಮಾತುಕತೆಗಳು ಯಾವುದೇ ಫಲ ನೀಡಿಲ್ಲ. ಇದರಿಂದಾಗಿ ಜನತಾದಳ (ಯು) ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ವರ್ಧಿಸುವುದು ಅನಿವಾರ್ಯವಾಗಿದೆ.

ಬಿಕ್ಕಟ್ಟು: ಪ್ರಧಾನಿ ಮಧ್ಯಸ್ಥಿಕೆ?

ಬೆಂಗಳೂರು, ಆ. 16– ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಜನತಾದಳ (ಯು) ಸೇರುವ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟನ್ನು ಪರಿಹರಿಸಲು ಅಂತಿಮ ಪ್ರಯತ್ನವಾಗಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮಧ್ಯೆ ಪ್ರವೇಶಿಸಿದ್ದಾರೆ ಎಂದು ಗೊತ್ತಾಗಿದೆ.

ಸ್ಥಾನ ಹೊಂದಾಣಿಕೆ ಸಂಬಂಧ ದೆಹಲಿಯಲ್ಲಿ ಇಂದು ಮಧ್ಯಾಹ್ನ ಬಿಜೆಪಿ ಮುಖಂಡರು ಹಾಗೂ ಲೋಕಶಕ್ತಿಯ ಅಧ್ಯಕ್ಷ ರಾಮಕೃಷ್ಣ ಹೆಗಡೆ ಮತ್ತು ಸಮತಾ ಪಕ್ಷದ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಅವರ ನಡುವೆ ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಆತಂಕಗೊಂಡ ವಾಜಪೇಯಿ ಅವರು ಮಧ್ಯೆ ಪ್ರವೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.