ಪಂಚಾಯಿತಿ ಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ, ಮಾರ್ಚ್ 31– ಕರ್ನಾಟಕ ಗ್ರಾಮ ಪಂಚಾಯಿತಿಗಳಿಗೆ ಆರು ವಾರಗಳೊಳಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ನೀಡಿದ್ದ ಆಜ್ಞೆಗೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿತು.

ಸುಪ್ರೀಂ ಕೋರ್ಟ್ನ ಈ ಮಧ್ಯಂತರ ಆದೇಶದಿಂದ ನಾಳೆಯಿಂದ ನಡೆಯಬೇಕಾಗಿದ್ದ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಿದಂತಾಗಿದೆ. ನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಮತ್ತು ಆರ್.ಸಿ. ಲಹೋಟಿ ಅವರಿದ್ದ ನ್ಯಾಯಪೀಠವು ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಿಚಾರಣೆಗೆ ಎತ್ತಿಕೊಂಡು ಈ ಆದೇಶ ನೀಡಿತು.

ಉಪ ಸಭಾಪತಿ ಅವಿರೋಧ ಆಯ್ಕೆ ಖಚಿತ

ಬೆಂಗಳೂರು, ಮಾರ್ಚ್ 31– ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ವಿರೋಧ ಪಕ್ಷಗಳು ಜನತಾದಳದ ಅಭ್ಯರ್ಥಿಯನ್ನು ಬೆಂಬಲಿಸಿರುವುದರಿಂದ ಅಭ್ಯರ್ಥಿ ಡೇವಿಡ್ ಸಿಮೆಯೋನ್ ಅವರು ಈ ಸ್ಥಾನಕ್ಕೆ ಆಯ್ಕೆಯಾಗುವುದು ಖಚಿತವಾಗಿದೆ. ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ಪರಿಷತ್ತಿನ ವಿರೋಧ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿದ ಪರಿಣಾ ಮವಾಗಿ ಸರ್ವಸಮ್ಮತ ಅಭ್ಯರ್ಥಿ ಆಯ್ಕೆಗೆ ಅವರೆಲ್ಲರೂ ಒಲವು ತೋರಿರುವುದರಿಂದ ಸಿಮೆಯೋನ್ ಗೆಲುವಿಗೆ ಹಾದಿ ಸುಗಮವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.