ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷದ ಹಿಂದೆ: ವಿ.ವಿ. ಉಪನ್ಯಾಸಕರಿಗೆ ಯುಜಿಸಿ ವೇತನ ಶ್ರೇಣಿ

Published 1 ಮೇ 2024, 0:04 IST
Last Updated 1 ಮೇ 2024, 0:04 IST
ಅಕ್ಷರ ಗಾತ್ರ

ಬೆಂಗಳೂರು, ಏ. 30– ರಾಜ್ಯದ ಆರು ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಮತ್ತು ಈ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರು– ಪ್ರಾಧ್ಯಾಪಕರಿಗೆ ಯುಜಿಸಿ ಪರಿಷ್ಕೃತ ವೇತನ ಶ್ರೇಣಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಯುಜಿಸಿ ಪರಿಷ್ಕೃತ ವೇತನ ಶ್ರೇಣಿಯನ್ನು 1996ರ ಜನವರಿ 1ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಲು ಸರ್ಕಾರ ನಿರ್ಧರಿ ಸಿದೆ; ಸರ್ಕಾರದ ಈ ತೀರ್ಮಾನದಿಂದ ವಿಶ್ವ
ವಿದ್ಯಾಲಯಗಳು, ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 15 ಸಾವಿರ ಉಪನ್ಯಾಸಕರು ಹಾಗೂ ಪ್ರಾಧ್ಯಾಪಕರಿಗೆ ಪ್ರಯೋಜನವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಿ.ಎ. ಮೊಯಿದ್ದೀನ್ ತಿಳಿಸಿದರು.

ನಗರ ವಿ.ವಿ ಬಿಬಿಎಂ ಪ್ರಶ್ನೆಪತ್ರಿಕೆ ಬಯಲು

ಬೆಂಗಳೂರು, ಏ. 30– ಬೆಂಗಳೂರು ವಿಶ್ವವಿದ್ಯಾಲಯದ ಎರಡನೇ ವರ್ಷದ ಬಿಬಿಎಂ ಪರೀಕ್ಷೆಯ ಪ್ರಶ್ನೆಪತ್ರಿಕೆ ಇಂದು ಬಯಲಾಗಿದ್ದು, ಪರೀಕ್ಷೆಗೆ ಎರಡು ಗಂಟೆ ಮೊದಲೇ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಲಭ್ಯವಾಗಿದೆ.

ಇಂದು ಬೆಳಿಗ್ಗೆ 9.30ಕ್ಕೆ ನಡೆಯಬೇಕಿದ್ದ ಬಿಸಿನೆಸ್ ಫೈನಾನ್ಸಿಂಗ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಬಯಲಾಗಿದ್ದು, ಅದನ್ನು ಬೇರೆ ವಿದ್ಯಾರ್ಥಿಗಳಿಗೆ ಹಂಚಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಯಶವಂತಪುರ ಪೊಲೀಸರು ಬೆಳಿಗ್ಗೆ 8 ಗಂಟೆ ವೇಳೆಯಲ್ಲಿ ಮತ್ತಿಕೆರೆಯಲ್ಲಿರುವ ವಿದ್ಯಾರ್ಥಿ ಒಬ್ಬನ ಮನೆಯ ಮೇಲೆ ದಾಳಿ ಮಾಡಿ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT