ಶುಕ್ರವಾರ, ಮಾರ್ಚ್ 5, 2021
30 °C

ಪ್ರಜಾವಾಣಿ 25ವರ್ಷಗಳ ಹಿಂದೆ: ಬುಧವಾರ, 17-01-1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೂವರು ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿ ಅನುಮತಿ ಕೋರಿಕೆ

ನವದೆಹಲಿ, ಜ. 16–ಬಹಳ ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಹವಾಲ ಪ್ರಕರಣದಲ್ಲಿ ಆರೋಪಿಗಳಾದ ಮೂವರು ಕೇಂದ್ರ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಕ್ರಮ ಜರುಗಿಸಲು ಸಿಬಿಐ ಇಂದು ರಾಷ್ಟ್ರಪತಿ ಅವರ ಅನುಮತಿ ಕೋರುವ ಮೂಲಕ ಈ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಮಾಜಿ ಉಪಪ್ರಧಾನಿ ದೇವಿ ಲಾಲ್, ಬಿಜೆಪಿ ಅಧ್ಯಕ್ಷ ಎಲ್‌.ಕೆ. ಅಡ್ವಾಣಿ, ಮಾಜಿ ಸಚಿವ ಅರ್ಜುನ್ ಸಿಂಗ್ ಸೇರಿದಂತೆ 7 ರಾಜಕಾರಣಿಗಳ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಎಸ್. ವರ್ಮಾ, ಎಸ್.ಪಿ. ಬರೂಚ ಮತ್ತು ಎಸ್‌.ಸಿ. ಸೇನ್  ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಇಂದು ಸಿಬಿಐ ಪರವಾಗಿ ಸಾಲಿಸಿಟರ್ ಜನರಲ್ ದೀಪಂಕರ್ ಪಿ. ಗುಪ್ತ ಅವರು ಹಾಜರಾಗಿ ಹವಾಲ ಪ್ರಕರಣದ ಬಗೆಗೆ ನಡೆಸಿರುವ ತನಿಖೆಯ ವಿವರವನ್ನು ಸಲ್ಲಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು