ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

25 ವರ್ಷಗಳ ಹಿಂದೆ | ಬೈವಾಟರ್ ಸಂಸ್ಥೆಗೆ ಗುತ್ತಿಗೆ: ಸಂಪುಟದ ದಿಢೀರ್ ಒಪ್ಪಿಗೆ

Published : 29 ಸೆಪ್ಟೆಂಬರ್ 2024, 23:30 IST
Last Updated : 29 ಸೆಪ್ಟೆಂಬರ್ 2024, 23:30 IST
ಫಾಲೋ ಮಾಡಿ
Comments

ಗ್ರಾಮೀಣ ಅಭಿವೃದ್ಧಿ ಎಂಜಿನಿಯರಿಂಗ್ ಇಲಾಖೆ ರಚನೆಗೆ ಸಂಪುಟ ಒಪ್ಪಿಗೆ

ಬೆಂಗಳೂರು, ಸೆ. 29– ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಆರೋಗ್ಯ ಇಲಾಖೆ, ಲೋಕೋಪಯೋಗಿ ಹಾಗೂ ಸಣ್ಣ ನೀರಾವರಿ ವಿಭಾಗಗಳನ್ನೂ ಒಟ್ಟಿಗೆ ಸೇರಿಸಿ ಪ್ರತ್ಯೇಕವಾಗಿ ಗ್ರಾಮೀಣ ಅಭಿವೃದ್ಧಿ ಎಂಜಿನಿಯರಿಂಗ್ ಇಲಾಖೆಯನ್ನಾಗಿ ರೂಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು.

ಇಂದು ಮುಖ್ಯಮಂತ್ರಿ ಜೆ. ಎಚ್. ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಸೇರಿದ್ದ ಸಚಿವ ಸಂಪುಟ ಈ ‘ಐತಿಹಾಸಿಕ ನಿರ್ಧಾರ’ವನ್ನು ತೆಗೆದುಕೊಂಡಿತು ಎಂದು ಸಂಪುಟದ ನಿರ್ಣಯಗಳನ್ನು ಗ್ರಾಮೀಣ ಅಭಿವೃದ್ಧಿ , ವಾರ್ತಾ ಹಾಗೂ ಪ್ರಚಾರ ಇಲಾಖೆ ಸಚಿವ ಎಂ. ಪಿ ಪ್ರಕಾಶ್ ಅವರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಈ ನಿರ್ಧಾರದಿಂದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಯೋಜನೆಗಳು, ಗ್ರಾಮೀಣ ನೈರ್ಮಲ್ಯ ಯೋಜನೆಗಳು ಹಾಗೂ ಇತರೆ ನಿರ್ಮಾಣ ಕಾಮಗಾರಿಗಳ ಜಾರಿಯಲ್ಲಿ ಆಗುತ್ತಿದ್ದ ವಿಳಂಬ ತಪ್ಪುತ್ತದೆ ಹಾಗೂ ನೇರ ಉಸ್ತುವಾರಿ ಸಾಧ್ಯವಾಗುತ್ತದೆ. ಜೊತೆಗೆ ಕಾಮಗಾರಿಗಳ ಪುನರಾವರ್ತನೆ ಆಗುವುದು ತಪ್ಪುತ್ತದೆ ಎಂದು ಪ್ರಕಾಶ್ ಅವರು ವಿವರಿಸಿದರು.

ಬೈವಾಟರ್ ಸಂಸ್ಥೆಗೆ ಗುತ್ತಿಗೆ: ಸಂಪುಟದ ದಿಢೀರ್ ಒಪ್ಪಿಗೆ

ಬೆಂಗಳೂರು, ಸೆ. 29– ಬೆಂಗಳೂರು ನಗರಕ್ಕೆ ಕಾವೇರಿ ನದಿಯಿಂದ ಕುಡಿಯುವ ನೀರು ತಂದು ವಿತರಣೆ ಮಾಡುವ ಕಾವೇರಿ  ಎರಡನೇ ಘಟ್ಟದ ನಾಲ್ಕನೇ ಹಂತದ ವಿವಾದಾತ್ಮಕ ಯೋಜನೆಯನ್ನು ಕಾರ್ಯಗತಗೊಳಿಸಲು ಮಲೇಶಿಯಾ ಮೂಲದ ಬೈವಾಟರ್ ಸಂಸ್ಥೆಗೆ ನೀಡಲು ಸಚಿವ ಸಂಪುಟ ಒಪ್ಪಿಗೆ ಕೊಟ್ಟಿದೆ.

ಇಂದು ಮುಖ್ಯಮಂತ್ರಿ ಜೆ. ಎಚ್. ಪಟೇಲ್ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಒಪ್ಪಿಗೆ ನೀಡಲಾಯಿತು ಎಂದು ಅಧಿಕೃತವಾಗಿ ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT