ಬೆಂಗಳೂರು, ಅ. 1– ‘ಕಿತ್ತೂರು ರಾಣಿ ಚೆನ್ನಮ್ಮನವರ ಸ್ಮರಣಾರ್ಥ ಅವರ ಹೆಸರಿನಲ್ಲಿ ಅಂಚೆಚೀಟಿ ಹಾಗೂ ನಾಣ್ಯವನ್ನು ಬಿಡುಗಡೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸಿ ರಾಜ್ಯ ಸರ್ಕಾರ ಪತ್ರ ಬರೆದಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಇಂದು ಇಲ್ಲಿ ತಿಳಿಸಿದರು.
ನಗರದ ರವೀಂದ್ರ ಕಲಾಕ್ಷೇತ್ರದ ಉದ್ಯಾನದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಪತ್ರ ಬರೆದಿದ್ದಾರೆ ಎಂದರು.