ಎಸ್ಮಾ ಜಾರಿ: ಇಂದಿನಿಂದ ಮೌಲ್ಯಮಾಪನ

ಬೆಂಗಳೂರು, ಮೇ 12– ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಯ ಸೇವೆಯನ್ನು ಅಗತ್ಯ ಸೇವಾ ನಿರ್ವಹಣಾ ಕಾಯ್ದೆಯ (ಎಸ್ಮಾ) ವ್ಯಾಪ್ತಿಗೆ ಒಳಪಡಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ನಾಳೆಯಿಂದ ರಾಜ್ಯದ 22 ಕೇಂದ್ರಗಳಲ್ಲಿ ಪಿಯುಸಿ ಮೌಲ್ಯಮಾಪನಕ್ಕೆ ಪರ್ಯಾಯ ವ್ಯವಸ್ಥೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಡಿಕೊಂಡಿದೆ.

ಸಚಿವರ ಹೇಳಿಕೆ: ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸಿ ಮುಷ್ಕರ ಹೂಡಿರುವ ಅಧ್ಯಾಪಕರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗದಿರಲು ಸಿಇಟಿ ಫಲಿತಾಂಶದ ಆಧಾರದ ಮೇಲೆ ಕಾಲೇಜುಗಳಿಗೆ ಪ್ರವೇಶ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ ಇಂದು ಹಾಸನದಲ್ಲಿ ತಿಳಿಸಿದರು.

ರಾಜೀನಾಮೆ ನೀಡಲು ಜೈರಾಮ್ಗೆ ಸೂಚನೆ

ಬೆಂಗಳೂರು, ಮೇ 12 (ಪಿಟಿಐ)– ಕರ್ನಾಟಕ ಯೋಜನಾ ಮಂಡಳಿಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಜೈರಾಮ್ ರಮೇಶ್ ಅವರಿಗೆ ತಿಳಿಸಿದ್ದಾರೆ.

‘ಏಷ್ಯಾ ವೀಕ್’ ಸಂದರ್ಶನದಲ್ಲಿ ಜೈರಾಮ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಟೀಕಿಸಿದ್ದಾರೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.