ಶುಕ್ರವಾರ, ಜನವರಿ 28, 2022
24 °C

25 ವರ್ಷಗಳ ಹಿಂದೆ: ಶುಕ್ರವಾರ 01.11.1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ನಾಲ್ಕು ಗಂಟೆ ದೊಂಬಿ, ಭಾರಿ ನಷ್ಟ‌

ಧಾರವಾಡ, ಅ. 31– ಗದಗ ಜಿಲ್ಲೆ ರಚನೆಗಾಗಿ ಸುಮಾರು 2 ದಶಕಗಳಿಗೂ ಹೆಚ್ಚು ಕಾಲದಿಂದ ಬೇಡಿಕೆ ಸಲ್ಲಿಸುತ್ತ ಬಂದಿರುವ ಗದಗ ಪಟ್ಟಣದಲ್ಲಿ ನಿನ್ನೆ ಉದ್ರಿಕ್ತ ಜನರ ದೊಡ್ಡ ಗುಂಪು ಹಿಂಸಾಚಾರದಲ್ಲಿ ತೊಡಗಿ, ಈ ಶತಮಾನದಲ್ಲಿಯೇ ಕಂಡು ಕೇಳರಿಯದಂತಹ ವ್ಯಾಪಕ ಪ್ರಮಾಣದಲ್ಲಿ ಸರ್ಕಾರಿ ಆಸ್ತಿಪಾಸ್ತಿಯನ್ನು ನಾಶಪಡಿಸುವಂತಹ ಪೈಶಾಚಿಕ ಕೃತ್ಯ ನಡೆಸಿದೆ.

ಸುಮಾರು ನಾಲ್ಕು ತಾಸುಗಳಿಗೂ ಹೆಚ್ಚು ಕಾಲ ಇಡೀ ಪಟ್ಟಣದಲ್ಲಿ ಉಂಟಾದ ಅರಾಜಕ ಪರಿಸ್ಥಿತಿಯಿಂದಾಗಿ ಹಿಂಸಾಚಾರ, ಆಸ್ತಿಪಾಸ್ತಿ ನಷ್ಟದಲ್ಲಿ ತೊಡಗಿದ ಸಾವಿರಾರು ಸಂಖ್ಯೆಯಲ್ಲಿದ್ದ ಜನರು ಸಮೂಹಸನ್ನಿಗೆ ಒಳಗಾದಂತೆ ವರ್ತಿಸಿ ರಾಜ್ಯ ಸರ್ಕಾರದ ಹಾಗೂ ಕೇಂದ್ರದ ಹಲವಾರು ಕಚೇರಿಗಳಿಗೆ ನುಗ್ಗಿ ಪೀಠೋಪಕರಣಗಳು, ದಾಖಲೆ ಪತ್ರಗಳು, ನಗದು ಹಣ, ಸರ್ಕಾರಿ ಹಾಗೂ ಸಾರ್ವಜನಿಕರ ವಾಹನಗಳು ಸೇರಿದಂತೆ ಕಚೇರಿಯ ಸಮಸ್ತ ವಸ್ತುಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿದ್ದಾರೆ. ವ್ಯಾಪಕ ಹಿಂಸಾಚಾರದಲ್ಲಿ ಸುಮಾರು 15 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಆಗಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ.

ಕ್ರಿಕೆಟ್ ಸ್ಟೇಡಿಯಂ ಬಳಿ ಸ್ಫೋಟ

ಬೆಂಗಳೂರು, ಅ. 31– ವಿಶ್ವ ಸುಂದರಿ ಸ್ಪರ್ಧೆ ನಡೆಯಲಿರುವ ನಗರದ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಹೊರಗೆ ಇಂದು ರಾತ್ರಿ ಅಪರಿಚಿತರು ಸ್ಫೋಟಕ ಸಿಡಿಸಿ ಹಾನಿಯುಂಟು ಮಾಡಿದ್ದಾರೆ.

ರಾತ್ರಿ ಸುಮಾರು 8.45ರ ವೇಳೆಗೆ ಕ್ರೀಡಾಂಗಣದ ಮುಖ್ಯ ಪ್ರವೇಶ ದ್ವಾರದ ಬಳಿ ಭಾರಿ ಸದ್ದಿನೊಂದಿಗೆ ಸ್ಫೋಟಕ ಸಿಡಿದು ಪಕ್ಕದಲ್ಲಿದ್ದ ಮಾಹಿತಿ ಕೇಂದ್ರದ ಗಾಜುಗಳು ಪುಡಿಯಾದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು