l ಮೇ ಅಂತ್ಯದೊಳಗೆ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ನಿರ್ಧಾರ
ಬೆಂಗಳೂರು, ಏ. 1– ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯನ್ನು ಮೇ 31ರ ಒಳಗೆ ಮುಗಿಸುವಂತೆ ರಾಜ್ಯ ಸಚಿವ ಸಂಪುಟ ಇಂದು ಇಲ್ಲಿ ತೀರ್ಮಾನ ಕೈಗೊಂಡಿತು.
ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವ ಎಂ.ಸಿ. ನಾಣಯ್ಯ, ‘ಒಮ್ಮೆ ವರ್ಗಾವಣೆ ಮಾಡಿದ ನಂತರ ಅದನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ವಿಶೇಷ ಸಂದರ್ಭದಲ್ಲಿ ಅಂತಹ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಅವರಷ್ಟೇ ತೀರ್ಮಾನ ಕೈಗೊಳ್ಳುವರು’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.