11 ರಾಜಕಾರಣಿಗಳ ಬಂಧನಕ್ಕೆ ವಾರಂಟ್

ನವದೆಹಲಿ, ಫೆ. 29 (ಯುಎನ್‌ಐ, ಪಿಟಿಐ)– ಹವಾಲ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಪ್ರಭಾವಿ ರಾಜಕಾರಣಿಗಳನ್ನು ಬಂಧಿಸಲು ಸಿಬಿಐ ಯಾವುದೇ ಕ್ರಮ ಕೈಗೊಳ್ಳದಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿಶೇಷ ಹವಾಲ ನ್ಯಾಯಾಲಯ, ಇಂದು 11 ರಾಜಕಾರಣಿಗಳ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಈ ನಡುವೆ, ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಎಲ್.ಕೆ.ಅಡ್ವಾಣಿ ಅವರಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

ಪ್ರಭಾವಿ ರಾಜಕಾರಣಿಗಳ ಬಂಧನಕ್ಕೆ ಸಂಬಂಧಿಸಿದಂತೆ ಬೇರೆ ಮಾನದಂಡ ನೀಡಬೇಕೆಂಬ ಸಿಬಿಐ ಮನವಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಕಾನೂನು ಎಲ್ಲರಿಗೂ ಒಂದೇ ಎಂದು ಸ್ಪಷ್ಟಪಡಿಸಿದೆ.

ಜೂನ್ 1ರಿಂದ ರಾಜ್ಯದಾದ್ಯಂತ ಸಾರಾಯಿ ನಿಷೇಧ

ಬೆಂಗಳೂರು, ಫೆ. 29– ಸಂಪೂರ್ಣ ಪಾನ ನಿಷೇಧವನ್ನು ಜಾರಿಗೆ ತರುವ ಮೊದಲ ಹೆಜ್ಜೆಯಾಗಿ ಈ ವರ್ಷದ ಜೂನ್ 1ರಿಂದ ರಾಜ್ಯದಲ್ಲಿ ಸಾರಾಯಿ ಮಾರಾಟವನ್ನು ಸರ್ಕಾರ ನಿಷೇಧಿಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ದೇವೇಗೌಡರು ಇಂದು ವಿಧಾನ ಪರಿಷತ್ತಿನಲ್ಲಿ ಪ್ರಕಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.