ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ | ಗುರುವಾರ, 9–11–1995

Last Updated 8 ನವೆಂಬರ್ 2020, 19:30 IST
ಅಕ್ಷರ ಗಾತ್ರ

‘ಸರ್ವರಿಗೂ ಆರೋಗ್ಯ ಸೌಲಭ್ಯ ಕಲ್ಪಿಸುವುದು ಅಸಾಧ್ಯ’

ಬೆಂಗಳೂರು, ನ. 8– ‘ಈ ಶತಮಾನದ ಅಂತ್ಯದೊಳಗೆ ಎಲ್ಲರಿಗೂ ಆರೋಗ್ಯ ಸೌಲಭ್ಯ ಕಲ್ಪಿಸಬೇಕು ಎಂಬುದು ವಿಶ್ವ ಆರೋಗ್ಯ ಸಂಸ್ಥೆಯ ಗುರಿಯಾದರೂ ಲಭ್ಯವಿರುವ ವ್ಯವಸ್ಥೆಯಲ್ಲಿ ನಿಗದಿತ ಅವಧಿಯೊಳಗೆ ದೇಶದ ಸರ್ವರಿಗೂ ಆರೋಗ್ಯ ಸೌಲಭ್ಯ ಕಲ್ಪಿಸಲು ಸಾಧ್ಯವಾಗುವುದಿಲ್ಲ’ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅಬ್ದುಲ್‌ ರೆಹಮಾನ್‌ ಅಂತುಳೆ ಇಂದು ಇಲ್ಲಿ ಸ್ಪಷ್ಟಪಡಿಸಿದರು.

‘ದೇಶದಲ್ಲಿ ಬಡತನ ಹೆಚ್ಚಿನ ಪ್ರಮಾಣದಲ್ಲಿ ಇರುವಂತೆಯೇ ಅನಾರೋಗ್ಯದಿಂದ ಬಳಲುತ್ತಿರುವ ಜನರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿದೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಆರೋಗ್ಯ ಸೌಲಭ್ಯ ಕಲ್ಪಿಸಲು ಯೋಜನಾಬದ್ಧ ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದ್ದು ಇವುಗಳ ಅನುಷ್ಠಾನಕ್ಕೆ ಕನಿಷ್ಠ ಇನ್ನೂ 20–25 ವರ್ಷಗಳಾದರೂ ಬೇಕಾಗುತ್ತದೆ’ ಎಂದು ಅವರು ಅಭಿಪ್ರಾಯಪಟ್ಟರು.

3 ವರ್ಷದಲ್ಲಿ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ

ಬೆಂಗಳೂರು, ನ. 8– ಬೆಂಗಳೂರು: ಮೈಸೂರು ನಡುವೆ ಎಕ್ಸ್‌ಪ್ರೆಸ್‌ ಹೆದ್ದಾರಿ ನಿರ್ಮಿಸಲು ಸಚಿವ ಸಂಪುಟ ಸಭೆ ಇಂದು ಒಪ್ಪಿಗೆ ನೀಡಿತು.

ಪುಣೆಯ ಕಲ್ಯಾಣಿ ಗ್ರೂಪ್ಸ್‌ ಕಂಪನಿ ನಿರ್ಮಿಸುವ ನಾಲ್ಕು ರಸ್ತೆಗಳಿರುವ ಈ ಹೆದ್ದಾರಿಯ ಮೊದಲ ಹಂತದ ಕಾರ್ಯ 3 ವರ್ಷದಲ್ಲಿ ಪೂರ್ಣಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT