ಶುಕ್ರವಾರ, ಸೆಪ್ಟೆಂಬರ್ 17, 2021
24 °C

25 ವರ್ಷಗಳ ಹಿಂದೆ: ಶನಿವಾರ 03-08-1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೂರವಾಣಿ ಕದ್ದಾಲಿಕೆ: ತನಿಖೆಗೆ ಆಗ್ರಹ

ಮಂಗಳೂರು, ಆ. 2– ಸರ್ಕಾರ ದೂರವಾಣಿ ಕದ್ದಾಲಿಕೆ ನಡೆಸುತ್ತಿದೆ ಎಂಬ ತಮ್ಮ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಅದರ ಬಗ್ಗೆ ಸದನ ಸಮಿತಿ ರಚಿಸಿ ತನಿಖೆ ನಡೆಸಬೇಕೆಂದು ರಾಷ್ಟ್ರೀಯ ನವನಿರ್ಮಾಣ ವೇದಿಕೆಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಇಂದು ಇಲ್ಲಿ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ವಿರೋಧ ಪಕ್ಷದ ನಾಯಕರು, ಪಕ್ಷದ ಭಿನ್ನಮತೀಯರು ಮತ್ತು ಪತ್ರಕರ್ತರ ದೂರವಾಣಿಯನ್ನು ಸರ್ಕಾರ ಕದ್ದಾಲಿಸುವುದು ಮುಂದುವರಿಯುತ್ತಿದೆ ಎಂಬ ಬಗ್ಗೆ ತಮಗೆ ಅಧಿಕೃತ ಮೂಲಗಳಿಂದ ಮಾಹಿತಿ ದೊರೆತಿದೆ ಎಂದರು.

ಕಳೆದ ಎರಡು ವರ್ಷಗಳಿಂದ, ದೇವೇಗೌಡರು ಮುಖ್ಯಮಂತ್ರಿ ಆದಾಗಿನಿಂದ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು