ಶನಿವಾರ, ಆಗಸ್ಟ್ 13, 2022
27 °C

25 ವರ್ಷಗಳ ಹಿಂದೆ: ಶುಕ್ರವಾರ, 15–12–1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾವೇರಿ: ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಅರ್ಜಿ ತಿರಸ್ಕೃತ
ನವದೆಹಲಿ, ಡಿ. 14–
ತುರ್ತಾಗಿ 30 ಟಿಎಂಸಿ ಅಡಿ ಕಾವೇರಿ ನೀರನ್ನು ಬಿಡುವಂತೆ ಕರ್ನಾಟಕಕ್ಕೆ ಆದೇಶ ನೀಡಬೇಕೆಂಬ ತಮಿಳುನಾಡಿನ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್‌ ಇಂದು ನಿರಾಕರಿಸಿತು. ಆದರೆ, ಈ ಅರ್ಜಿಯನ್ನು ಕಾವೇರಿ ನ್ಯಾಯಮಂಡಲಿ ಮುಂದೆ ಸಲ್ಲಿಸುವಂತೆ ತಮಿಳುನಾಡಿಗೆ ಸೂಚಿಸಿತು.

ಕಾವೇರಿ ನೀರಿನ ಹಂಚಿಕೆ ವಿವಾದದ ಬಗೆಗೆ ಪದೇ ಪದೇ ನ್ಯಾಯಾಲಯದ ಕಟಕಟೆ ಹತ್ತುವ ಬದಲು ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ತುರ್ತುಸ್ಥಿತಿಯ ಅವಶ್ಯಕತೆ ಅಥವಾ ಪರಸ್ಪರ ಹೊಂದಾಣಿಕೆಯಂತೆ ನೀರು ಹಂಚಿಕೆಯ ಉಸ್ತುವಾರಿಗಾಗಿ ತಜ್ಞರನ್ನೊಳಗೊಂಡ ಸ್ಥಾಯಿ ಸಮಿತಿಯೊಂದನ್ನು ರಚಿಸಿಕೊಳ್ಳಬೇಕು ಎಂದು ಸಹ ಕೋರ್ಟ್‌ ಸಲಹೆ ಮಾಡಿತು.

‘ಸಹಕಾರಿ ಸಂಘದಲ್ಲಿ ಸರ್ಕಾರಿ ಹಸ್ತಕ್ಷೇಪಕ್ಕೆ ಕಡಿವಾಣ’
ಬೆಂಗಳೂರು, ಡಿ. 14–
ಸಹಕಾರ ಸಂಘಗಳ ಕಾರ್ಯನಿರ್ವಹಣೆಯಲ್ಲಿ ಸರ್ಕಾರಿ ಹಸ್ತಕ್ಷೇಪವನ್ನು ಕಡಿಮೆ ಮಾಡುವ ಸಲುವಾಗಿ ಸದಸ್ಯರ ನಾಮಕರಣ ಹಾಗೂ ಚುನಾವಣೆಗಳನ್ನು ಮುಂದೂಡಲು ಸರ್ಕಾರಕ್ಕೆ ಇರುವ ಅಧಿಕಾರವನ್ನು ತೆಗೆದುಹಾಕಲಾಗುವುದು ಎಂದು ಸಹಕಾರ ಸಚಿವ ಎಸ್‌.ಎಸ್‌. ಪಾಟೀಲ್‌ ಇಂದು ಇಲ್ಲಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು