ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶನಿವಾರ, 30–12–1995

Last Updated 29 ಡಿಸೆಂಬರ್ 2020, 19:30 IST
ಅಕ್ಷರ ಗಾತ್ರ

ಕಾವೇರಿ: ಇಂದು ಪ್ರಧಾನಿ ಸಮ್ಮುಖ 4 ರಾಜ್ಯ ಮುಖ್ಯಮಂತ್ರಿಗಳ ಸಭೆ
ನವದೆಹಲಿ, ಡಿ. 29–
ತಮಿಳುನಾಡಿಗೆ ಕೂಡಲೇ 11 ಟಿಎಂಸಿ ಅಡಿ ನೀರು ಬಿಡಬೇಕು ಎಂಬ ಕಾವೇರಿ ನ್ಯಾಯಮಂಡಳಿ ಆಜ್ಞೆಯಿಂದ ಉಂಟಾಗಿರುವ ವಿವಾದಕ್ಕೆ ಪರಿಹಾರ ಹುಡುಕಲು ಸುಪ್ರೀಂ ಕೋರ್ಟ್ ಆದೇಶದಂತೆ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ನಾಳೆ ರಾತ್ರಿ 7.45ಕ್ಕೆ ಇಲ್ಲಿನ ಹೈದರಾಬಾದ್ ಭವನದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಮುಖ್ಯಮಂತ್ರಿಗಳು ಮತ್ತು ಇತರ ನಾಯಕರ ಸಭೆ ಕರೆದಿದ್ದಾರೆ.

ಈಗಾಗಲೇ ಕರ್ನಾಟಕ ಮತ್ತು ತಮಿಳುನಾಡು ನಾಯಕರು ದೆಹಲಿಗೆ ತಂಡ ತಂಡವಾಗಿ ಆಗಮಿಸುತ್ತಿದ್ದಾರೆ. ನಾಳೆ ಬೆಳಿಗ್ಗೆಯೂ ಹಲವರು ಬರುವವರಿದ್ದಾರೆ.

ಕರ್ನಾಟಕದಿಂದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಆರು ಮಂದಿ ಸಚಿವರು ಆಗಮಿಸುತ್ತಿದ್ದಾರೆ. ಇವರಲ್ಲದೆ ಒಂಬತ್ತು ಸಂಸತ್ ಸದಸ್ಯರು, ಪ್ರತಿಪಕ್ಷಗಳ ನಾಯಕರು ಮತ್ತು ಅಧಿಕಾರಿಗಳು ಸೇರಿದಂತೆ ಒಟ್ಟು 50 ಮಂದಿ ಕರ್ನಾಟಕದ ನಿಯೋಗದಲ್ಲಿ ಇರುತ್ತಾರೆ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಒಪ್ಪಂದ– ಸಹಿ
ಬೆಂಗಳೂರು, ಡಿ. 29–
ಅಂದಾಜು 700 ಕೋಟಿ ರೂ. ವೆಚ್ಚದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಒಡಂಬಡಿಕೆಗೆ (ಎಂಒಯು) ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ಹಾಗೂ ಟಾಟಾ ಉದ್ಯಮ ಗುಂಪಿನ ಪರವಾಗಿ ಇಂದು ಇಲ್ಲಿ ಸಹಿ ಹಾಕಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT