ರಾಜಕೀಯ ಪರಿಹಾರಕ್ಕೆ ಸಿದ್ಧ: ಕೃಷ್ಣ

ಬೆಂಗಳೂರು, ನ.30– ಕೃಷ್ಣಾ ಮೇಲ್ದಂಡೆಯ ಅಲಮಟ್ಟಿ ಜಲಾಶಯದ ಎತ್ತರಕ್ಕೆ ಸಂಬಂಧಿಸಿದಂತೆ ಎದ್ದಿರುವ ವಿವಾದವನ್ನು ಆಂಧ್ರಪ್ರದೇಶ ಜೊತೆ ಚರ್ಚಿಸಿ ರಾಜಕೀಯ ಪರಿಹಾರ ಕಂಡುಕೊಳ್ಳಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ಹೇಳಿದರು.

ಈ ವಿವಾದವನ್ನು ರಾಜಕೀಯ ಪರಿಹಾರ ಅಥವಾ ನ್ಯಾಯಾಮಗದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳಲು ಆಂಧ್ರಪ್ರದೇಶ ಸಿದ್ಧವಿದೆ ಎಂದು ಆ ರಾಜ್ಯದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿರುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಕೃಷ್ಣ ಅವರು ರಾಜ್ಯದ ನಿಲುವನ್ನು ಸ್ಪಷ್ಟಪಡಿಸಿದರು.

ಮತ್ತಷ್ಟು ಅನಗತ್ಯ ಹುದ್ದೆಗಳ ರದ್ದಿಗೆ ನಿರ್ಧಾರ

ಬೆಂಗಳೂರು, ನ.30– ಆಡಳಿತ ವೆಚ್ಚವನ್ನು ಮಿತಿಗೊಳಿಸುವ ಉದ್ದೇಶದಿಂದ ವಿವಿಧ ಇಲಾಖೆಗಳಲ್ಲಿ ಅನಗತ್ಯವಾಗಿರುವ ಮತ್ತಷ್ಟು ಹುದ್ದೆಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಹಣಕಾಸು ರಾಜ್ಯ ಸಚಿವ ಎಂ.ಶಿವಣ್ಣ ಇಲ್ಲಿ ಹೇಳಿದರು.

‘ಇದೇ ಉದ್ದೇಶದಿಂದ ಹಿಂದಿನ ಸರ್ಕಾರ ವಿವಿಧ ಇಲಾಖೆಗಳಲ್ಲಿ ಸುಮಾರು 20 ಸಾವಿರ ಹುದ್ದೆಗಳನ್ನು ರದ್ದು ಮಾಡುವ ಮೂಲಕ ಒಳ್ಳೆಯ ಕೆಲಸ ಮಾಡಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.