ಸಂಗೀತ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಕ್ಕಾಗಿ ಅವರಿಗೆ ಈ ಪದವಿ ನೀಡಲಾಗುತ್ತಿದೆ. ದೆಹಲಿ ವಿಶ್ವವಿದ್ಯಾಲಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆಯಲಿರುವ ವಿಶೇಷ ಪದವಿ ಪ್ರಧಾನ ಸಮಾರಂಭದಲ್ಲಿ ಈ ಪದವಿ ನೀಡಿ ಗೌರವಿಸಲಾಗುವುದು ಎಂದು ವಿ.ವಿ ಕುಲಸಚಿವರು, ಗಂಗೂಬಾಯಿ ಹಾನಗಲ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.