25 ವರ್ಷಗಳ ಹಿಂದೆ: ಗುರುವಾರ, ಜನವರಿ 15, 1998

ಎಂ.ಎಸ್. ಸುಬ್ಬಲಕ್ಷ್ಮಿ ‘ಭಾರತ ರತ್ನ’
ನವದೆಹಲಿ, ಜ. 14 (ಯುಎನ್‌ಐ)– ಕಾರ್ನಾಟಕ ಸಂಗೀತ ಪರಂಪರೆಯ ವಿಖ್ಯಾತ ವಿದುಷಿ ಎಂ.ಎಸ್. ಸುಬ್ಬಲಕ್ಷ್ಮಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ದ ಗೌರವವನ್ನು ಇಂದು ಪ್ರಕಟಿಸಲಾಗಿದೆ.
ಸುಬ್ಬಲಕ್ಷ್ಮಿ ಅವರ ಸಂಗೀತ ಕ್ಷೇತ್ರದಲ್ಲಿನ ಕೊಡುಗೆಗಾಗಿ ಅವರಿಗೆ ಪ್ರಸಕ್ತ ಸಾಲಿನ ‘ಭಾರತ ರತ್ನ’ ನೀಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಈ ಮೊದಲು ಕ್ಷಿಪಣಿ ತಂತ್ರಜ್ಞಾನದ ವಿಜ್ಞಾನಿ ಎ.ಪಿ.ಜೆ. ಅಬ್ದುಲ್ ಕಲಾಮ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.