ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

25 ವರ್ಷಗಳ ಹಿಂದೆ: ನ್ಯಾ. ಸಲ್ಡಾನ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾಪ

Published : 9 ನವೆಂಬರ್ 2023, 23:30 IST
Last Updated : 9 ನವೆಂಬರ್ 2023, 23:30 IST
ಫಾಲೋ ಮಾಡಿ
Comments

ಬೆಂಗಳೂರು, ನ. 9– ‘ಹೈಕೋರ್ಟಿನ ನ್ಯಾಯಮೂರ್ತಿ ಎಂ.ಎಫ್‌.ಸಲ್ಡಾನ ಅವರು ಶಾಸನಸಭೆ ಹಾಗೂ ಶಾಸಕರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ಅವರ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡನೆಗೆ ಅನುಮತಿ ಕೋರಿ, ಅವರನ್ನು ವಿಚಾರಣೆಗೆ ಗುರಿಪಡಿಸಬೇಕು’ ಎಂದು ಒತ್ತಾಯಿಸಿದ ಅಪರೂಪದ ಪ್ರಸಂಗ ವಿಧಾನಸಭೆಯಲ್ಲಿ ಇಂದು ನಡೆಯಿತು.

‘ಸಲ್ತಾನ ಅವರನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಸದನ ನಿರ್ಣಯ ತೆಗೆದುಕೊಂಡು ಸುಪ್ರೀಂ ಕೋರ್ಟಿಗೆ ಮನವಿ ಮಾಡಬೇಕೆಂದು’ ಬಿಜೆಪಿಯ ಹಿರಿಯ ಸದಸ್ಯ ಎಚ್‌.ಎನ್‌.ನಂಜೇಗೌಡ ಅವರು ಒತ್ತಾಯಿಸಿದರು.

ವಿಧಾನಸಭೆಯಲ್ಲಿ, ಕಬ್ಬನ್‌ ಪಾರ್ಕ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟಿನ ನ್ಯಾಯಮೂರ್ತಿ ಸಲ್ಡಾನ ಅವರು ಪ್ರೆಸ್‌ಕ್ಲಬ್‌ ಹಾಗೂ ಬೆಳಗಾವಿಯ ವಕೀಲರ ಸಂಘದ ಸಭೆಯಲ್ಲಿ ಮಾತನಾಡುತ್ತಾ ಶಾಸನಸಭೆಗೆ ಹಾಗೂ ಶಾಸಕರಿಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಅವರ ನಡವಳಿಕೆ ಸದನದ ಹಕ್ಕುಚ್ಯುತಿಯಾಗುತ್ತದೆ ಎಂದು ಹೇಳುತ್ತಾ, ಹಕ್ಕುಚ್ಯುತಿ ನಿರ್ಣಯ ಮಂಡನೆಗೆ ಅನುಮತಿ ಕೋರಿ ವಿಷಯದ ಬಗ್ಗೆ ಪ್ರಾಸ್ತಾವಿಕವಾಗಿ ಕೆಲವು ವಿಚಾರಗಳನ್ನು ಸಭಾಧ್ಯಕರ ಗಮನಕ್ಕೆ ತಂದ ಸಂದರ್ಭದಲ್ಲಿ ನಂಜೇಗೌಡ ಅವರು ಮೇಲಿನ ಸಲಹೆ ಮಾಡಿದರು.

ದಿಗ್ಬಂಧನ ತೆರವು: ಕ್ಲಿಂಟನ್‌ ಆದೇಶ

ವಾಷಿಂಗ್ಟನ್‌, ನ. 9 (ಯುಎನ್‌ಐ)– ಭಾರತ ಮತ್ತು ಪಾಕಿಸ್ತಾನದ ಮೇಲೆ ಹೇರಲಾಗಿರುವ ದಿಗ್ಬಂಧನಗಳಲ್ಲಿ ಕೆಲವನ್ನು ಹಿಂತೆಗೆದುಕೊಳ್ಳುವ ಅಧಿಕೃತ ಆದೇಶವನ್ನು ಅಮೆರಿಕದ ಅಧ್ಯಕ್ಷ ಬಿಲ್‌ ಕ್ಲಿಂಟನ್‌ ಇಂದು ಹೊರಡಿಸಿದರು.

ಅಣ್ವಸ್ತ್ರ ಪ್ರಸರಣ ತಡೆ ಕುರಿತು ಅಮೆರಿಕ ವ್ಯಕ್ತಪಡಿಸಿದ ಕಳವಳಕ್ಕೆ ಪ್ರತಿಕ್ರಿಯೆಯಾಗಿ ಈ ಎರಡು ರಾಷ್ಟ್ರಗಳು ‘ಗುಣಾತ್ಮಕ ಕ್ರಮಗಳನ್ನು’ ತೆಗೆದುಕೊಂಡಿರುವುದು ಇದಕ್ಕೆ ಕಾರಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT