ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ | ಸರ್ಕಾರಕ್ಕೆ ಬೆಂಬಲ ವಾಪಸು ಖಚಿತ: ಜಯಾ ಘೋಷಣೆ

Published 12 ಏಪ್ರಿಲ್ 2024, 23:30 IST
Last Updated 12 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಸರ್ಕಾರಕ್ಕೆ ಬೆಂಬಲ ವಾಪಸು ಖಚಿತ: ಜಯಾ ಘೋಷಣೆ

ನವದೆಹಲಿ, ಏ. 12 (ಯುಎನ್‌ಐ, ಪಿಟಿಐ)– ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸು ಪಡೆಯುವುದು ಅನಿವಾರ್ಯ ಎಂದು ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ಇಂದು ಪ್ರಕಟಿಸುವುದರೊಂದಿಗೆ 14 ತಿಂಗಳ ಪ್ರಧಾನಿ ವಾಜಪೇಯಿ ನೇತೃತ್ವದ ಸರ್ಕಾರ ತೀವ್ರ ಬಿಕ್ಕಟ್ಟಿಗೆ ಸಿಲುಕಿದೆ.

15ರಿಂದ ಪುನರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ಸರ್ಕಾರ ಬಲಾಬಲ ಪ್ರದರ್ಶಿಸುವುದು ಅನಿವಾರ್ಯವಾಗಿದೆ. ಈ ಮಧ್ಯೆ ಓಂಪ್ರಕಾಶ್ ಚೌತಾಲ ಅವರ ಭಾರತೀಯ ರಾಷ್ಟ್ರೀಯ ಲೋಕದಳದ ಬೆಂಬಲವನ್ನು ಗಳಿಸಲು ಬಿಜೆಪಿ ವಿಫಲವಾಗಿದೆ.

ಬಡ್ತಿ ಮೀಸಲಾತಿ: ಹೆಚ್ಚುವರಿ ಹುದ್ದೆ ಸೃಷ್ಟಿಸಲು ನಿರ್ಧಾರ

ಬೆಂಗಳೂರು, ಏ. 12– ಬಡ್ತಿಯಲ್ಲಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕಳೆದ
ಫೆ. 3ರಂದು ಹೊರಡಿಸಿದ್ದ ಸರ್ಕಾರಿ ಆಜ್ಞೆಗೆ ಕೆಲವು ಮಾರ್ಪಾಡುಗಳನ್ನು ಮಾಡಲು ಹಾಗೂ 1978ರಿಂದ ಭರ್ತಿ ಮಾಡದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನಿಗದಿ ಪಡಿಸಲಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸಲು ಇಂದು ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT