ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಮಂಗಳವಾರ 13–3–1996

Last Updated 12 ಮಾರ್ಚ್ 2021, 19:31 IST
ಅಕ್ಷರ ಗಾತ್ರ

ಬಳಸದ ಶಾಲಾ ಕಾಲೇಜು ಭೂಮಿ ಮರುಸ್ವಾಧೀನ- ಜಿಲ್ಲಾಧಿಕಾರಿಗಳಿಗೆ ಆದೇಶ
ಬೆಂಗಳೂರು, ಮಾರ್ಚ್ 12
– ಶಾಲೆ, ಕಾಲೇಜು ಮುಂತಾದ ಸಾರ್ವಜನಿಕ ಉದ್ದೇಶಕ್ಕಾಗಿ ಸರ್ಕಾರಿ ಭೂಮಿಯನ್ನು ಹಲವಾರು ವರ್ಷಗಳ ಹಿಂದೆಯೇ ಮಂಜೂರು ಮಾಡಿಸಿಕೊಂಡೂ ಉದ್ದೇಶಿತ ಕಾರ್ಯಕ್ಕೆ ಬಳಕೆ ಮಾಡದೇ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಿ ಅದನ್ನು ಮರುಸ್ವಾಧೀನ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಎಲ್.ಜಾಲಪ್ಪ ಇಂದು ಇಲ್ಲಿ ತಿಳಿಸಿದರು.

ಆಯಕಟ್ಟಿನ ಸ್ಥಳಗಳಲ್ಲಿ ಇರುವ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತನೆ ಮಾಡಿಟ್ಟುಕೊಂಡಿರುವ ಸಾವಿರಾರು ಪ್ರಕರಣಗಳು ರಾಜ್ಯದಾದ್ಯಂತ ಇದ್ದು ಅಂಥ ಅನುಮತಿಯನ್ನು ಹಿಂತೆಗೆದುಕೊಂಡು ಕೃಷಿಯೇತರ ಉದ್ದೇಶಕ್ಕಾಗಿ ಮಾಡಿದ ಪರಿವರ್ತನೆಯನ್ನು ರದ್ದುಪಡಿಸುವಂತೆಯೂ ಈ ಆದೇಶದಲ್ಲಿ ಸೂಚಿಸಲಾಗಿದೆ ಎಂದು ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ವಿವರಿಸಿದರು.

‘ಬೇಡ್ತಿ, ಅಘನಾಶಿನಿ ಯೋಜನೆ ಜಾರಿ ಇಲ್ಲ’
ಕಲ್ಬುರ್ಗಿ, ಮಾರ್ಚ್ 12–
ಬೇಡ್ತಿ ಮತ್ತು ಅಘನಾಶಿನಿ ಜಲವಿದ್ಯುತ್ ಯೋಜನೆಗಳನ್ನು ಸ್ಥಳೀಯರ ವಿರೋಧದಿಂದಾಗಿ ಸರ್ಕಾರ ಸಂಪೂರ್ಣವಾಗಿ ಕೈಬಿಟ್ಟಿದೆ. ಈ ಯೋಜನೆಯನ್ನು ಜಾರಿಗೆ ತರುವುದಿಲ್ಲ ಎಂದು ಉಪಮುಖ್ಯಮಂತ್ರಿ ಜೆ.ಎಚ್.ಪಟೇಲ್ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT