ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಸೋಮವಾರ 08.07.1996

Last Updated 7 ಜುಲೈ 2021, 19:30 IST
ಅಕ್ಷರ ಗಾತ್ರ

ಅರೆಕಾಲಿಕ ಉಪನ್ಯಾಸಕರ ನೇಮಕ ನಿಷೇಧ
ಬೆಂಗಳೂರು, ಜುಲೈ 7–
‘ಅರೆಕಾಲಿಕ ಉಪನ್ಯಾಸಕರು ಮುಂದಿಟ್ಟಿರುವ ಸೇವಾ ಕಾಯಮಾತಿಯ ಕಿರಿಕಿರಿಯಿಂದ ಪಾರಾಗುವ ಉದ್ದೇಶದಿಂದ’ ಅಗತ್ಯವಿರುವಲ್ಲಿ ನಿವೃತ್ತ ಉಪನ್ಯಾಸಕರನ್ನೇ ಕಾಲೇಜುಗಳು ನೇಮಕ ಮಾಡಿಕೊಳ್ಳಬೇಕು ಎಂದು ಸೂಚಿಸಿರುವ ಸರ್ಕಾರ ಯಾವುದೇ ಕಾರಣಕ್ಕೂ ಇನ್ನು ಮುಂದೆ ಅರೆಕಾಲಿಕ (ಪಾರ್ಟ್‌ಟೈಮ್) ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಕೂಡದು ಎಂದು ನಿಷೇಧ ಹೇರಿದೆ.

ಕಳೆದ ಜೂನ್ 26ರರಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಯವರು ಕಳಿಸಿರುವ ಆದೇಶದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಅರೆಕಾಲಿಕ ಉಪನ್ಯಾಸಕರ ನೇಮಕಾತಿಯನ್ನು ಕಡ್ಡಾಯವಾಗಿ ನಿಷೇಧಿಸಿರುವುದಾಗಿ ಸ್ಪಷ್ಟಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT